Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:32 - ಕನ್ನಡ ಸಮಕಾಲಿಕ ಅನುವಾದ

32 ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ತುಜಿ ಕುಶಿ ಕಾಯ್ ಮನುನ್ ದಾಕ್ವುತಲೊ ಉಜ್ವೊಡ್ ಅನಿ ತುಜ್ಯಾ ಇಸ್ರಾಯೆಲಾಚ್ಯಾ ಲೊಕಾಕ್ನಿ ತೊ ಮಹಿಮಾ ಹಾನ್ತಾ”. ತೆಚ್ಯಾ ಸಾಟ್ನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:32
22 ತಿಳಿವುಗಳ ಹೋಲಿಕೆ  

ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು.


ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”


ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.


ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.


ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


ನಿಶ್ಚಯವಾಗಿ ಮಹಿಮೆಯು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ದೇವರಿಗೆ ಭಯಪಡುವವರಿಗೆ ದೇವರ ರಕ್ಷಣೆಯು ಸಮೀಪವಾಗಿದೆ.


ಪವಿತ್ರ ವೇದದಲ್ಲಿ ಬರೆದಿರುವಂತೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”


ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ.


ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ನೀನು ಬಂಧಿತರಿಗೆ, ‘ಹೊರಗೆ ಬನ್ನಿರಿ,’ ಕತ್ತಲೆಯಲ್ಲಿರುವವರಿಗೆ, ‘ಬೆಳಕಿಗೆ ಬನ್ನಿರಿ,’ ಎಂದು ಹೇಳಬಹುದು. “ಅವರು ದಾರಿಗಳಲ್ಲಿ ಮೇಯಿಸುವರು. ಅವರ ಎಲ್ಲಾ ಎತ್ತರವಾದ ಪ್ರದೇಶಗಳೂ ಕೂಡ ಅವರಿಗೆ ಹುಲ್ಲುಗಾವಲಾಗಿರುವುವು.


ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.


ಈ ರಕ್ಷಣೆಯನ್ನು ನೀವು ಎಲ್ಲಾ ಜನಗಳ ಮುಂದೆ ಸಿದ್ಧಪಡಿಸಿದ್ದೀರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು