Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:36 - ಕನ್ನಡ ಸಮಕಾಲಿಕ ಅನುವಾದ

36 ಅಲ್ಲಿ ಆಶೇರನ ಗೋತ್ರದ ಫನೂಯೇಲನ ಮಗಳಾದ ಅನ್ನಳೆಂಬ ಒಬ್ಬ ಬಹು ಮುಪ್ಪಿನ ಪ್ರವಾದಿನಿಯಿದ್ದಳು. ಅವಳು ಮದುವೆಯಾಗಿ ಗಂಡನೊಂದಿಗೆ ಏಳು ವರ್ಷ ಬಾಳಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು; ಆಕೆ ತನ್ನ ಕನ್ಯಾವಸ್ಥೆ ಕಳೆದ ತರುವಾಯ ಗಂಡನ ಕೂಡ ಏಳು ವರುಷ ಬಾಳುವೆಮಾಡಿ ಎಂಭತ್ತು ನಾಲ್ಕು ವರುಷ ವಿಧವೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಅನ್ನಾ ಮನುನ್ ನಾವ್ ಹೊತ್ತಿ ಎಕ್ ಪ್ರವಾದಿನ್‍ಬಿ ಥೈ ಹೊತ್ತಿ. ತಿ ಫಾನುಯೆಲಾಚಿ ಲೆಕ್ ಅಶೆರ್ ಮನ್ತಲ್ಯಾ ಘರಾನ್ಯಾಚಿ. ತಿ ನಗಿನ್ ಹೊವ್ನ್ ಸಾತ್ ವರ್ಸಾ ಅಪ್ನಾಚ್ಯಾ ಘೊವಾಚ್ಯಾ ವಾಂಗ್ಡಾ ಹೊತ್ತಿ. ಅನಿ ತಿ ಲೈ ಮ್ಹಾತಾರಿ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:36
18 ತಿಳಿವುಗಳ ಹೋಲಿಕೆ  

ಅವನಿಗೆ ಅವಿವಾಹಿತರಾದ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಪ್ರವಾದಿಸುವವರಾಗಿದ್ದರು.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯನ್ನು ಹಿಂಬಾಲಿಸಿ ಹೊರಹೊರಟರು.


ಪ್ರಿಯರೇ, ಈಗ ಆತ್ಮಿಕ ವರಗಳನ್ನು ಕುರಿತು ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.


ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು, ಅವರು ಪ್ರವಾದಿಸುವರು.


ಮುದಿಪ್ರಾಯದಲ್ಲಿಯೂ ಫಲ ಕೊಡುವರು. ಅವರು ಹಸಿರಾಗಿ ಶೋಭಿಸುವರು.


ಸಿವುಡು ತನ್ನ ಕಾಲದಲ್ಲಿ ಮನೆಗೆ ಸೇರುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿ ಸೇರುವೆ.


ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲರಿಗೆ ನ್ಯಾಯ ತೀರಿಸುತ್ತಿದ್ದಳು.


ಆಗ ಲೇಯಳು, “ನಾನು ಧನ್ಯಳಾದೆನು, ಏಕೆಂದರೆ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು,” ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.


ಆಶೇರ್ ಕುಲದಿಂದ 12,000, ನಫ್ತಲೀಮ ಕುಲದಿಂದ 12,000, ಮನಸ್ಸೆ ಕುಲದಿಂದ 12,000,


ಚೀಟು ಬಿದ್ದ ಐದನೆಯ ಭಾಗವು ಆಶೇರನ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರ ದೊರೆಯಿತು.


ಅವನಿಗೆ ಇಬ್ಬರು ಹೆಂಡತಿಯರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.


“ಈಗ ಮನುಷ್ಯಪುತ್ರನೇ, ನೀನು ತಮ್ಮ ಸ್ವಂತ ಕಲ್ಪನೆಯಿಂದ ಪ್ರವಾದಿಸುವ ನಿನ್ನ ಜನರ ಪುತ್ರಿಯರಿಗೆ ವಿರೋಧವಾಗಿ ನಿನ್ನ ಮುಖವನ್ನಿಟ್ಟು, ಅವರಿಗೆ ವಿರೋಧವಾಗಿ ಪ್ರವಾದಿಸಿ,


ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು” ಎಂದನು.


ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.


ಆದರೆ ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆ ಮಾಡುವ ಇಲ್ಲವೆ ಪ್ರವಾದನೆ ಹೇಳುವ ಪ್ರತಿ ಸ್ತ್ರೀಯು ತನ್ನ ತಲೆಯನ್ನು ಅವಮಾನ ಪಡಿಸುತ್ತಾಳೆ. ಹೀಗೆ ಮಾಡುವ ಸ್ತ್ರೀಯು ತನ್ನ ತಲೆ ಬೋಳಿಸಿಕೊಳ್ಳುವುದಕ್ಕೆ ಸಮಾನವಾಗಿದೆ.


ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.


ವಯಸ್ಸಿನಲ್ಲಿ ಅರವತ್ತಕ್ಕೆ ಕಡಿಮೆಯಿಲ್ಲದ ವಿಧವೆಯರನ್ನು ಮಾತ್ರ ವಿಧವೆಯರ ಪಟ್ಟಿಯಲ್ಲಿ ಸೇರಿಸು. ಅಂಥವಳು ಗಂಡನಿಗೆ ನಂಬಿಗಸ್ತಳಾಗಿದ್ದಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು