Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:41 - ಕನ್ನಡ ಸಮಕಾಲಿಕ ಅನುವಾದ

41 ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆತನ ತಂದೆತಾಯಿಗಳು ಪ್ರತಿವರುಷವೂ ಪಸ್ಕಹಬ್ಬದ ಜಾತ್ರೆಗೆ ಯೆರೂಸಲೇವಿುಗೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಹರಿಎಕ್ ವರ್ಸಾ ಜೆಜುಚೆ ಬಾಯ್-ಬಾಬಾ ಪಾಸ್ಕಾಚ್ಯಾ ಸನಾಕ್ ಮನುನ್ ಜೆರುಜಲೆಮಾಕ್ ಜಾಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:41
18 ತಿಳಿವುಗಳ ಹೋಲಿಕೆ  

ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು.


ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು.


ಎಲ್ಕಾನನು ಯೆಹೋವ ದೇವರಿಗೆ ಪ್ರತಿ ವರುಷದ ಬಲಿಯನ್ನೂ, ತನ್ನ ಹರಕೆಯನ್ನೂ ಸಲ್ಲಿಸುವುದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ,


ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


“ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು.


ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು.


ವರುಷಕ್ಕೆ ಮೂರು ಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಸಾರ್ವಭೌಮ ಯೆಹೋವ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು.


ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.


ಯೇಸುವಿಗೆ ಹನ್ನೆರಡು ವರ್ಷವಾದಾಗ, ಪದ್ಧತಿಯ ಪ್ರಕಾರ ಅವರು ಹಬ್ಬಕ್ಕಾಗಿ ಯೆರೂಸಲೇಮಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು