Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:49 - ಕನ್ನಡ ಸಮಕಾಲಿಕ ಅನುವಾದ

49 ಯೇಸು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆಹೋಯಿತೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆತನು ಅವರಿಗೆ - ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದದ್ದು ನಿಮಗೆ ತಿಳಿಯಲಿಲ್ಲವೇ? ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ತನ್ನಾ ತೆನಿ “ತುಮಿ ಮಾಕಾ ಕಶ್ಯಾಕ್ ಹುಡ್ಕುಕ್ ಲಾಗಲ್ಲ್ಯಾಶಿ? ಮಿಯಾ ಮಾಜ್ಯಾ ಬಾಬಾಚ್ಯಾ ಘರಾತ್ ರಾವ್ಕ್ ಪಾಜೆ ಮನುನ್ ತುಮ್ಕಾ ಗೊತ್ತ್ ನಾ ಕಾಯ್?” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:49
11 ತಿಳಿವುಗಳ ಹೋಲಿಕೆ  

ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


ತಂದೆತಾಯಿಗಳು ಯೇಸುವನ್ನು ಕಂಡಾಗ ಆಶ್ಚರ್ಯಪಟ್ಟರು. ಆತನ ತಾಯಿಯು, “ಮಗು, ನೀನು ನಮಗೆ ಹೀಗೇಕೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಗೊಂಡು ನಿನ್ನನ್ನು ಹುಡುಕಿದೆವು,” ಎಂದಳು.


ಯೇಸು ಅವರಿಗೆ, “ನನ್ನ ತಂದೆ ಯಾವಾಗಲೂ ಕೆಲಸ ಮಾಡುತ್ತಾರೆ. ನಾನೂ ಕೆಲಸ ಮಾಡುತ್ತೇನೆ,” ಎಂದರು.


ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


“ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು