Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:51 - ಕನ್ನಡ ಸಮಕಾಲಿಕ ಅನುವಾದ

51 ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಅಶೆ ಜೆಜು ತೆಂಚ್ಯಾ ವಾಂಗ್ಡಾ ನಜರೆತಾಕ್ ಗೆಲೊ. ತೊ ತೆಂಕಾ ಖಾಲ್ತಿ ಹೊವ್ನ್ ರ್‍ಹಾಲೊ.ತೆಚ್ಯಾ ಬಾಯ್ನ್ ಹೆ ಸಗ್ಳೆ ಅಪ್ನಾಚ್ಯಾ ಮನಾತ್ ಗೊಳಾ ಕರುನ್ ಥವ್ನ್ ಘೆಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:51
15 ತಿಳಿವುಗಳ ಹೋಲಿಕೆ  

ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.


“ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”


ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.


ಯೋಸೇಫನೂ ಮರಿಯಳೂ ಕರ್ತದೇವರ ನಿಯಮದ ಪ್ರಕಾರ ಎಲ್ಲವನ್ನು ಮಾಡಿ ಮುಗಿಸಿದ ಮೇಲೆ, ತಮ್ಮ ಊರಾಗಿದ್ದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.


ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.


ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.


ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.


ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.


ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ!’ ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಹೇಳಿ, ‘ಕಪೆರ್ನೌಮಿನಲ್ಲಿ ಎಂತೆಂಥ ಕಾರ್ಯಗಳು ನಡೆಯಿತೆಂದು ನಾವು ಕೇಳಿದೆವು. ಅದನ್ನು ಇಲ್ಲಿ ನಿನ್ನ ಸ್ವಂತ ಊರಿನಲ್ಲಿಯೂ ಮಾಡು’ ಎಂದು ನನಗೆ ಹೇಳುವಿರಿ,” ಎಂದರು.


“ನಜರೇತಿನ ಯೇಸು ಹಾದು ಹೋಗುತ್ತಿದ್ದಾರೆ,” ಎಂದು ಜನರು ಅವನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು