Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:7 - ಕನ್ನಡ ಸಮಕಾಲಿಕ ಅನುವಾದ

7 ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಕೆ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಿನಿ ಅಪ್ನಾಚ್ಯಾ ಪಯ್ಲೆಚ್ಯಾ ಪೊರಾಕ್ ಜಲಮ್ ದಿಲಿನ್. ತೆಂಕಾ ರ್‍ಹಾವ್ಕ್ ಎಕ್ ಘರಾತ್ ಸೈತ್ ಜಾಗೊ ಗಾವುಕ್‍ನತ್ತೊ. ಮರಿನ್ ಪೊರಾಕ್ ಫಾಳಿಚ್ಯಾ ತುಕ್ಡ್ಯಾತ್ನಿ ಲಪ್ಟುನ್ ಗೊದ್ನಿತ್ ನಿಜ್ವುಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:7
16 ತಿಳಿವುಗಳ ಹೋಲಿಕೆ  

ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.


ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಈತನು ಬಡಗಿಯ ಪುತ್ರನಲ್ಲವೇ? ಮರಿಯಳೆಂಬುವಳು ಈತನ ತಾಯಿಯಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಎಂಬುವರು ಈತನ ತಮ್ಮಂದಿರಲ್ಲವೇ?


ಆದರೆ ನಾನು ಹುಳದಂಥವನೇ ಹೊರತು ಮನುಷ್ಯನಲ್ಲ; ನಾನು ಮನುಷ್ಯರಿಂದ ನಿಂದೆ ಹಾಗು ತಿರಸ್ಕಾರಕ್ಕೆ ಗುರಿಯಾಗಿದ್ದೇನೆ.


ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು, ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಕುಳ್ಳಿರಿಸಿ, ವಸತಿಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.


ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ ವಸತಿಗೃಹದಲ್ಲಿದ್ದಾಗ, ಯೆಹೋವ ದೇವರು ಮೋಶೆಯ ಎದುರಿಗೆ ಬಂದು ಅವನನ್ನು ಕೊಲ್ಲುವುದಕ್ಕಿದ್ದಾಗ,


ಆಗ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವುದಕ್ಕೆ ವಸತಿಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ, ಚೀಲದ ಬಾಯಲ್ಲಿಟ್ಟಿದ್ದ ತನ್ನ ಹಣವನ್ನು ಕಂಡನು.


ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ, ಪ್ರತಿಯೊಬ್ಬನ ಹಣವು ಅವನವನ ಚೀಲದ ಬಾಯಲ್ಲಿ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರುಗಿ ತೆಗೆದುಕೊಂಡು ಬಂದಿದ್ದೇವೆ.


ಅವರು ಬೇತ್ಲೆಹೇಮಿನಲ್ಲಿ ಇದ್ದಾಗ, ಆಕೆಗೆ ಹೆರಿಗೆಯ ಕಾಲ ಸಮೀಪಿಸಿತು.


ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು