Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:10 - ಕನ್ನಡ ಸಮಕಾಲಿಕ ಅನುವಾದ

10 ಫಲದ ಕಾಲ ಬಂದಾಗ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷಿತೋಟದ ಫಲವನ್ನು ಕೊಡುವಂತೆ ತನ್ನ ಸೇವಕನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಆ ಗೇಣಿಗೆದಾರರು ಅವನನ್ನು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಫಲಕಾಲ ಬಂದಾಗ ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದ. ಗೇಣಿದಾರರು ಅವನನ್ನು ಹೊಡೆದು ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಫಲಕಾಲ ಬಂದಾಗ ದ್ರಾಕ್ಷೆಯತೋಟದ ಹುಟ್ಟುವಳಿಯ ಪಾಲನ್ನು ತೆಗೆದುಕೊಳ್ಳುವದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದರಾಕ್ಷಿ ಗೊಳಾ ಕರ್‍ತಲ್ಲ್ಯಾ ಎಳಾರ್, ತ್ಯಾ ಮಾನ್ಸಾನ್ ಅಪ್ನಾಚೊ ಸುಗ್ಗಿಚೊ ವಾಟೊ ಘೆವ್ನ್ ‍ಯೆ ಮನುನ್ ಅಪ್ನಾಚ್ಯಾ ಎಕ್ಲ್ಯಾ ಗುಲಾಮಾಕ್ ಮಳ್ಯಾಕ್ಡೆ ಧಾಡುನ್ ದಿಲ್ಯಾನ್, ಖರೆ ತ್ಯಾ ಗುತ್ಕೆ ಧರಲ್ಲ್ಯಾನಿ ತ್ಯಾ ಗುಲಾಮಾಕ್ ಮಾರ್ ಘಾಟ್ಲ್ಯಾನಿ, ಅನಿ ಖಾಲಿ ಹಾತಾನಿ ಪರ್ತುನ್ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:10
32 ತಿಳಿವುಗಳ ಹೋಲಿಕೆ  

“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.


ಆಗ ಪಷ್ಹೂರನು ಪ್ರವಾದಿಯಾದ ಯೆರೆಮೀಯನನ್ನು ಹೊಡೆದು, ಅವನನ್ನು ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಬೆನ್ಯಾಮೀನನ ಮೇಲ್ಭಾಗದಲ್ಲಿದ್ದ ಬಾಗಿಲಲ್ಲಿದ್ದ ಮರದ ಉಪಕರಣಕ್ಕೆ ಕಟ್ಟಿದರು.


ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.


ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.


“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.


ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.


ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.


ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ಅವರು ಎರಡನೆಯವನನ್ನೂ ಸಹ ಹೊಡೆದು, ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.


ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು