Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:13 - ಕನ್ನಡ ಸಮಕಾಲಿಕ ಅನುವಾದ

13 “ಆಗ ದ್ರಾಕ್ಷಿಯ ತೋಟದ ಯಜಮಾನನು, ‘ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿಸುವೆನು, ಬಹುಶಃ ಅವರು ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಆ ದ್ರಾಕ್ಷೆಯ ತೋಟದ ಧಣಿಯು - ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆಗ ತೋಟದ ಯಜಮಾನನು, ‘ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ತೊ ದರಾಕ್ಷಿಚ್ಯಾ ಮಳ್ಯಾಚೊ ಮಾಲಿಕ್ “ಮಿಯಾ ಕಾಯ್ ಕರು? ಮಿಯಾ ಮಾಜ್ಯಾ ಅಪುರ್‍ಬಾಯೆಚ್ಯಾ ಎಕ್ಲ್ಯಾಚ್ ಲೆಕಾಕ್ ಧಾಡುನ್ ದಿತಾ, ತೆಚೆ ತೆನಿ ಆಯಿಕ್ತಿಲ್!” ಮಟ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:13
19 ತಿಳಿವುಗಳ ಹೋಲಿಕೆ  

ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.


ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”


ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಈಗ ನಾನು ಕಂಡು, ಇವರೇ ದೇವರ ಪುತ್ರರು ಎಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.


ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.


ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿ ಫಲವನ್ನು ಫಲಿಸುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿದ್ದು ಏಕೆ?


“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.


“ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,


ಆ ಯಜಮಾನನು ಮೂರನೆಯವನನ್ನು ಕಳುಹಿಸಿದನು. ಆಗ ಅವರು ಅವನನ್ನೂ ಗಾಯಪಡಿಸಿ ಹೊರಗೆ ಹಾಕಿದರು.


“ಆದರೆ ಗೇಣಿಗೆದಾರರು ಅವನನ್ನು ಕಂಡಾಗ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು