ಲೂಕ 20:37 - ಕನ್ನಡ ಸಮಕಾಲಿಕ ಅನುವಾದ37 ಆದರೆ ಉರಿಯುವ ಪೊದೆಯ ಬಳಿ ಕರ್ತದೇವರು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು,’ ಎಂದು ತಿಳಿಸಿ ಸತ್ತವರು ಏಳುತ್ತಾರೆಂಬದನ್ನು ಮೋಶೆಗೆ ವ್ಯಕ್ತಪಡಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯ ಗ್ರಂಥದಲ್ಲಿ, ಅಂದರೆ ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ ಸ್ಪಷ್ಟಪಡಿಸಲಾಗಿದೆ. ಅಲ್ಲಿ ಸರ್ವೇಶ್ವರನನ್ನು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು ಆಗಿದ್ದಾರೆ’ ಎಂದು ಹೇಳಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳಿದ್ದಾನೆ. ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಮೊಯ್ಜೆ ಮರಲ್ಲಿ ಮಾನ್ಸಾ ಪರ್ತುನ್ ಝಿತ್ತಿ ಹೊತ್ಯಾತ್ ಮನುನ್ ಬರಬ್ಬರ್ ದಾಕ್ವುನ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಜಳ್ತಲ್ಯಾ ಝಿಳಿಚ್ಯಾ ವಿಶಯಾತ್ ಬಗ್ತಾನಾ, ಥೈ ದೆವಾಚ್ಯಾ ವಿಶಯಾತ್, ಅಬ್ರಾಹಾಮಾಚೊ ದೆವ್ ಇಸಾಕಾಚೊ ದೆವ್, ಅನಿ ಜಾಕೊಬಾಚೊ ದೆವ್” ಮನುನ್ ಮನ್ತಾ. ಅಧ್ಯಾಯವನ್ನು ನೋಡಿ |