Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:46 - ಕನ್ನಡ ಸಮಕಾಲಿಕ ಅನುವಾದ

46 “ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಬಯಸುವವರಾಗಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಪ್ರಸ್ತಗಳಲ್ಲಿ ಪ್ರಥಮಸ್ಥಾನ, ಇವುಗಳಲ್ಲಿ ಇಷ್ಟವುಳ್ಳವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 “ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 “ಖಾಯ್ದೆ ಶಿಕ್ವುತಲ್ಯಾಂಚ್ಯಾ ವಿಶಯಾತ್ ಉಶಾರ್ಕಿನ್ ರಾವಾ, ಲಾಂಬ್-ಲಾಂಬ್ಲ್ಯಾ ಅಂಗಿಯಾ ನೆಸುನ್ ಫಿರುಕ್, ಅನಿ ಬಾಜಾರಾತ್ನಿ ಲೊಕಾನಿಕ್ನಾ ನಮಸ್ಕಾರ್ ಕರುನ್ ಘೆವ್ಕ್ ತೆಂಕಾ ಲೈ ಕುಶಿ. ಸಿನಾಗೊಗಾತ್ನಿ ತೆಂಕಾ ಬರೆ-ಬರೆ ಜಾಗೆ ಪಾಜೆ, ಅನಿ ಸನಾಚ್ಯಾ ಜೆವ್ನಾಕ್ ಯೆಲ್ಲ್ಯಾ ತನ್ನಾಬಿ ಬರೆ-ಬರೆ ಜಾಗೆ ತೆಂಕಾ ಪಾಜೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:46
14 ತಿಳಿವುಗಳ ಹೋಲಿಕೆ  

“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಇಷ್ಟಪಡುತ್ತೀರಿ.


ಊಟಕ್ಕೆ ಆಹ್ವಾನಿತರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಯೇಸು ಗುರುತಿಸಿ, ಅವರಿಗೆ ಒಂದು ಸಾಮ್ಯವನ್ನು ಹೇಳಿದರು:


ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.


ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.


ಸಭೆಗೆ ನಾನು ಬರೆದಿದ್ದೆನು. ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವುದಿಲ್ಲ.


ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು.


ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.


ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.


ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.


ಯೇಸು ಜನಸಮೂಹಕ್ಕೂ ತಮ್ಮ ಶಿಷ್ಯರಿಗೂ


ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು