Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:47 - ಕನ್ನಡ ಸಮಕಾಲಿಕ ಅನುವಾದ

47 ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ಜಪತಪಗಳನ್ನು ದೀರ್ಘವಾಗಿ ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ತೆನಿ ಲಜಿನಸ್ತಾನಾ ಘೊಮರಲ್ಲ್ಯಾ ಬಾಯ್ಕೊಮನ್ಸಾಂಚೊ ಫಾಯ್ದೊ ಕಾಡುನ್ ಘೆವ್ನ್ ತೆಂಚಿ ಘರಾ ಲುಟ್ತ್ಯಾತ್, ಅನಿ ಲಾಂಬ್-ಲಾಂಬ್ ಮಾಗ್ನಿಯಾ ಕರುನ್ ಅಪ್ನಿ ಬರೆ ಮನುನ್ ದಾಕ್ವುತ್ಯಾತ್! ತೆಂಕಾ ಎಗ್ದಮ್ ಕಟಿನ್ ಶಿಕ್ಷಾ ರ್‍ಹಾತಾ!” ಮನುನ್ ಸಾಂಗಟ್ಲ್ಯಾನ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:47
23 ತಿಳಿವುಗಳ ಹೋಲಿಕೆ  

ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ,


ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ. ಯುದ್ಧದಿಂದ ತಿರುಗಿಕೊಂಡು ನಿರ್ಭಯವಾಗಿ ಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊಳ್ಳುತ್ತೀರಿ.


ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು, ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತರುತ್ತಾರೆ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.


ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.


ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.


“ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಬಯಸುವವರಾಗಿದ್ದಾರೆ;


ಯೇಸು ಗಮನಿಸುತ್ತಿರುವಾಗ, ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ದೇವಾಲಯದ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು