Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:12 - ಕನ್ನಡ ಸಮಕಾಲಿಕ ಅನುವಾದ

12 “ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಸಗ್ಳೆ ಘಡುಚ್ಯಾ ಅದ್ದಿ ತುಮ್ಕಾ ಧರುನ್ ಘೆವ್ನ್ ಜಾವ್ನ್ ಹೊತಾ, ಅನಿ ತರಾಸ್ ದಿವ್ನ್ ಹೊತಾ; ತುಮ್ಕಾ ಸಿನಾಗೊಗಾತ್ನಿ ನ್ಹೆವ್ನ್ ತುಮ್ಚಿ ಪರಿಕ್ಷಾ ಕರುನ್ ಹೊತಾ, ಅನಿ ತುಮ್ಕಾ ಬಂದಿಖಾನ್ಯಾತ್ ಘಾಲುನ್ ಹೊತಾ: ಮಾಜೆಸಾಟಿ ತುಮ್ಕಾ ರಾಜಾಂಚ್ಯಾ, ಅನಿ ಅದಿಕಾರ್‍ಯಾಂಚ್ಯಾ ಇದ್ರಾಕ್ ವೊಡುನ್ ಹಾನುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:12
31 ತಿಳಿವುಗಳ ಹೋಲಿಕೆ  

ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು,


ಯೆಹೂದ್ಯರು ಪೌಲನ ವಿರುದ್ಧ ಏಕೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದಕ್ಕೆ ನಿಜಸಂಗತಿಯನ್ನು ಕಂಡುಹಿಡಿಯಲು ಸಹಸ್ರಾಧಿಪತಿಯು ಅಪೇಕ್ಷೆಪಟ್ಟನು. ಮರುದಿನ ಪೌಲನನ್ನು ಬಿಡುಗಡೆ ಮಾಡಿ, ಮುಖ್ಯಯಾಜಕರೂ ನ್ಯಾಯಸಭೆಯೂ ಕೂಡಿಬರಬೇಕೆಂದು ಅಪ್ಪಣೆಮಾಡಿದನು. ಆಮೇಲೆ ಪೌಲನನ್ನು ತಂದು ಅವರ ಎದುರಿನಲ್ಲಿ ನಿಲ್ಲಿಸಿದರು.


ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.


ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.


ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.


ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು.


ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು