Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:17 - ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ನನ್ನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾಕಾ ಲಾಗುನ್ ಸಗ್ಳೆ ಜಾನಾ ತುಮ್ಕಾ ಧುರ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:17
18 ತಿಳಿವುಗಳ ಹೋಲಿಕೆ  

ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.


ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.


ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.


ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ.


ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.


ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ.


ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.


ತಂದೆತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿತರೂ ನಿಮ್ಮನ್ನು ಹಿಡಿದುಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.


ಆದರೆ ನಿಮ್ಮ ತಲೆ ಕೂದಲೊಂದಾದರೂ ನಾಶವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು