ಲೂಕ 21:24 - ಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಉಲ್ಲ್ಯಾಸ್ಯಾಕ್ನಿ ಚಾಕ್ವಾನಿ ತೊಡುನ್ ಮಾರುನ್ ಹೊತಾ, ಅನಿ ಹುರಲ್ಲ್ಯಾಕ್ನಿ , ಗುಲಾಮ್ ಕರುನ್ ದುಸ್ರ್ಯಾ-ದುಸ್ರ್ಯಾ ದೆಸಾಕ್ನಿ ಘೆವ್ನ್ ಜಾವ್ನ್ ಹೊತಾ, ಅನಿ ತೆಂಚೊ ಎಳ್ ರ್‍ಹಾಯ್ ಪತರ್ ಮಟ್ಲ್ಯಾರ್, ಜುದೆವ್ ನ್ಹಯ್ ಹೊತ್ತಿ ಲೊಕಾ ಜೆರುಜಲೆಮಾಚೆ ತುಕ್ಡೆ-ತುಕ್ಡೆ ಕರುನ್ ಟಾಕ್ತ್ಯಾತ್”. ಅಧ್ಯಾಯವನ್ನು ನೋಡಿ |