Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಅವರು ಯೇಸುವಿಗೆ, “ಬೋಧಕರೇ, ಇವುಗಳು ಯಾವಾಗ ಆಗುವುವು? ಇವುಗಳು ಸಂಭವಿಸುವುದಕ್ಕಿರುವಾಗ ಯಾವ ಸೂಚನೆ ಇರುವುದು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಗುರುವೇ, ಇದು ಸಂಭವಿಸುವುದು ಯಾವಾಗ? ಇದೀಗಲೆ ಸಂಭವಿಸಲಿದೆ ಎಂದು ತಿಳಿಸುವ ಪೂರ್ವಸೂಚನೆ ಯಾವುದು?” ಎಂದು ಕೆಲವರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು - ಬೋಧಕನೇ, ಅದು ಯಾವಾಗ ಆಗುವದು? ಅದು ಸಂಭವಿಸುವದಕ್ಕಿರುವಾಗ ಯಾವ ಸೂಚನೆ ತೋರುವದು ಎಂದು ಆತನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಶಿಷ್ಯರಲ್ಲಿ ಕೆಲವರು ಯೇಸುವಿಗೆ, “ಗುರುವೇ, ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಆ ಸಮಯವನ್ನು ಯಾವ ಸೂಚನೆಗಳಿಂದ ತಿಳಿದುಕೊಳ್ಳಬೇಕು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಶಿಸಾನಿ “ಗುರುಜಿ, ಹೆ ಕನ್ನಾ ಘಡ್ತಾ, ಅನಿ ಹೆ ಸಗ್ಳೆ ಹೊನಾರ್ ಹಾಯ್ ,ಮನುನ್ ದಾಕ್ವುಕ್ ಹೆಚ್ಯಾ ಅದ್ದಿ ಕಾಯ್- ಕಾಯ್ ಹೊತಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:7
13 ತಿಳಿವುಗಳ ಹೋಲಿಕೆ  

“ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


“ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು.


ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು.


ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.


ಆದರೆ ಯೇಸು, “ನೀವು ಕಾಣುತ್ತಿರುವ ಇವೆಲ್ಲವೂ ಕೆಡವಿಹಾಕಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯದ ಕಾಲ ಬರುವುದು,” ಎಂದರು.


ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು