Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:20 - ಕನ್ನಡ ಸಮಕಾಲಿಕ ಅನುವಾದ

20 ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಸೆಚ್ ಜೆವಾನ್ ಕರುಕ್ ಹೊಲ್ಲ್ಯಾ ಮಾನಾ, ತೆನಿ ಎಕ್ ಖೊಲ್ಲೆ ಆಯ್ದಾನ್ ಘೆಟ್ಲ್ಯಾನ್, ಅನಿ ಹೆ ದೆವಾಚ್ಯಾ ನ್ಹವ್ಯಾ ಕರಾರಾಚೆ ಮಾಜೆ ರಗಾತ್, ತುಮ್ಚೆಸಾಟ್ನಿ ವೊತಲ್ಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:20
13 ತಿಳಿವುಗಳ ಹೋಲಿಕೆ  

ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು.


ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ನೀನು ನನ್ನೊಡನೆ ಒಡಂಬಡಿಕೆಯನ್ನು ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ನಿನ್ನ ಸೆರೆಯವರನ್ನು ನೀರಿಲ್ಲದ ಬಾವಿಯೊಳಗಿಂದ ಬಿಡುಗಡೆಮಾಡುವೆನು.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು.


ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.


ಮರಣ ಶಾಸನವು ಬರೆದವನು ಜೀವದಿಂದಿರುವವರೆಗೂ ಅದು ಎಂದಿಗೂ ಜಾರಿಗೆ ಬರುವುದಿಲ್ಲ.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು