ಲೂಕ 22:35 - ಕನ್ನಡ ಸಮಕಾಲಿಕ ಅನುವಾದ35 ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಮತ್ತು ಆತನು - ನಿಮ್ಮನ್ನು ನಾನು ಹಮ್ಮೀಣಿ ಹಸಿಬೆ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ “ಮಿಯಾ ತುಮ್ಕಾ, ಪೈಸೆ ಘೆವ್‌ನಸ್ತಾನಾ, ಪಿಸ್ವಿ ಘೆವ್‌ನಸ್ತಾನಾ, ನಾ ಹೊಲ್ಯಾರ್, ಹೊನಾಯಾ ನಸ್ತಾನಾ, ಭಾಯ್ರ್ ಧಾಡುನ್ ದಿಲ್ಲೊ ತನ್ನಾ, ತುಮ್ಕಾ ಕಾಯ್ ತರ್ ಕಮಿ ಪಡಲ್ಲೆ ಕಾಯ್? ನಾ ಕಾಯ್ಬಿ ಕಮಿ ಪಡುಕ್ನಾ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |