Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:38 - ಕನ್ನಡ ಸಮಕಾಲಿಕ ಅನುವಾದ

38 ಶಿಷ್ಯರು, “ಕರ್ತದೇವರೇ, ಇಗೋ ಇಲ್ಲಿ ಎರಡು ಖಡ್ಗಗಳಿವೆ,” ಎಂದರು. ಅದಕ್ಕೆ ಯೇಸು ಅವರಿಗೆ, “ಅಷ್ಟು ಸಾಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವರು, “ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ” ಅನ್ನಲು, ಆತನು ಅವರಿಗೆ, “ಅಷ್ಟು ಸಾಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 “ಗುರುವೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ,” ಎಂದು ಶಿಷ್ಯರು ಹೇಳಲು ಯೇಸು, “ಅಷ್ಟು ಸಾಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವರು - ಸ್ವಾಮೀ, ಇಗೋ ಇಲ್ಲಿ ಎರಡು ಕತ್ತಿಗಳಿವೆ ಅನ್ನಲು ಆತನು ಅವರಿಗೆ - ಅಷ್ಟು ಸಾಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಶಿಷ್ಯರು, “ಪ್ರಭುವೇ, ಇಲ್ಲಿ ನೋಡು, ಎರಡು ಖಡ್ಗಗಳಿವೆ” ಎಂದು ಹೇಳಿದರು. ಯೇಸು “ಅಷ್ಟು ಸಾಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ಶಿಸಾನಿ “ಧನಿಯಾ! ಅಬಕ್! ಅಮ್ಚ್ಯಾಕ್ಡೆ ದೊನ್ ಕೊಯ್ತೆ ಹಾತ್!” ಮಟ್ಲ್ಯಾನಿ, ತನ್ನಾ ಜೆಜುನ್,“ತವ್ಡೆಚ್ ಫಿರೆ” ಮನುನ್ ಪರ್ತುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:38
9 ತಿಳಿವುಗಳ ಹೋಲಿಕೆ  

ಯೇಸುವಿನ ಸುತ್ತಲಿದ್ದ ಶಿಷ್ಯರು ಮುಂದೆ ಸಂಭವಿಸುವುದನ್ನು ಅರಿತು ಯೇಸುವಿಗೆ, “ಕರ್ತದೇವರೇ, ನಾವು ಖಡ್ಗದಿಂದ ಹೊಡೆಯೋಣವೋ?” ಎಂದು ಕೇಳಿದರು.


ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.


ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಆಗ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಖಡ್ಗವನ್ನು ಹಿರಿದು, ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.


ಆಗ ಯೇಸು ಅವರಿಗೆ, “ಆದರೆ ಈಗ ಹಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಅದರಂತೆಯೇ ಪ್ರಯಾಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಖಡ್ಗಯಿಲ್ಲದವನು ತನ್ನ ಬಟ್ಟೆಯನ್ನು ಮಾರಿ ಅದನ್ನು ಕೊಂಡುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು