Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:42 - ಕನ್ನಡ ಸಮಕಾಲಿಕ ಅನುವಾದ

42 “ತಂದೆಯೇ, ನಿಮ್ಮ ಚಿತ್ತವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸಿ. ಆದರೂ ನನ್ನ ಚಿತ್ತವಲ್ಲ ನಿಮ್ಮ ಚಿತ್ತದಂತೆಯೇ ಆಗಲಿ,” ಎಂದು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಓ ಪಿತನೇ, ನಿಮಗೆ ಇಷ್ಟವಾದರೆ ಈ ಕಷ್ಟದ ಕೊಡವನ್ನು ನನ್ನಿಂದ ತೊಲಗಿಸಿರಿ. ಆದರೂ ನನ್ನ ಚಿತ್ತವಲ್ಲ, ನಿಮ್ಮ ಚಿತ್ತವೇ ನೆರವೇರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಮೊಣಕಾಲೂರಿ - ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತವೇ ಆಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ತಂದೆಯೇ, ನಿನಗೆ ಇಷ್ಟವಿದ್ದರೆ, ಈ ಶ್ರಮೆಯ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಇಷ್ಟದಂತಾಗದೆ ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತೆನಿ, “ಬಾಬಾ, ತುಕಾ ಮನ್ ರ್‍ಹಾಲ್ಯಾರ್, ಹೆ ಕಸ್ಟಾಚೆ ಆಯ್ದಾನ್, ಮಾಜೆಕ್ನಾ ಧುರ್ ಕರ್, ಮಾಜ್ಯಾ ಮನಾ ಸರ್ಕೆ ನ್ಹಯ್, ತುಜ್ಯಾ ಮನಾಕ್ ಕಶೆ ದಿಸ್ತಾ ತಸೆ ಕರ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:42
21 ತಿಳಿವುಗಳ ಹೋಲಿಕೆ  

ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.


“ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


ಆಗ ಯೇಸು ಪೇತ್ರನಿಗೆ, “ನಿನ್ನ ಕತ್ತಿಯನ್ನು ಒರೆಯಲ್ಲಿ ಹಾಕು! ನನ್ನ ತಂದೆಯು ನನಗೆ ಕೊಟ್ಟ ಪಾತ್ರೆಯಿಂದ ನಾನು ಕುಡಿಯಬಾರದೋ?” ಎಂದು ಹೇಳಿದರು.


ಯೇಸು ಉತ್ತರವಾಗಿ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೇ?” ಎಂದು ಕೇಳಿದರು. ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ, ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನಾನು ನಿನ್ನ ಕೈಯೊಳಗಿಂದ ತತ್ತರಿಸುವಂಥ ಪಾತ್ರೆಯನ್ನೂ, ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ. ಇನ್ನು ಮೇಲೆ ನೀನು ಅದನ್ನು ತಿರುಗಿ ಕುಡಿಯುವುದೇ ಇಲ್ಲ.


ಯೇಸು ಅವರನ್ನು ಬಿಟ್ಟು ಹೊರಟುಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಪುನಃ ಹೇಳಿ ಪ್ರಾರ್ಥಿಸಿದರು.


ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.


ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.


ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.


ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು