Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:8 - ಕನ್ನಡ ಸಮಕಾಲಿಕ ಅನುವಾದ

8 ಯೇಸು ಪೇತ್ರ ಯೋಹಾನರನ್ನು ಕರೆದು, “ನೀವು ಹೋಗಿ ನಮಗೋಸ್ಕರ ಪಸ್ಕಭೋಜನವನ್ನು ಸಿದ್ಧಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಯೇಸುಸ್ವಾಮಿ ತಮ್ಮ ಶಿಷ್ಯರಾದ ಪೇತ್ರ ಹಾಗೂ ಯೊವಾನ್ನನನ್ನು ಕರೆದು, “ಹೋಗಿ, ಪಾಸ್ಕಭೋಜನ ಸಿದ್ಧಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೇಸು ಪೇತ್ರನಿಗೂ ಯೋಹಾನನಿಗೂ - ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ ಎಂದು ಹೇಳಿ ಅವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸುವು ಪೇತ್ರ ಮತ್ತು ಯೋಹಾನರಿಗೆ, “ಹೋಗಿ, ಪಸ್ಕದ ಊಟವನ್ನು ನಮಗಾಗಿ ಸಿದ್ಧಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಜೆಜುನ್ ಪೆದ್ರುಕ್, ಅನಿ ಜುವಾಂವಾಕ್ “ಜಾವಾ, ಅನಿ ಅಮ್ಚ್ಯಾ ಪಾಸ್ಕಾಚ್ಯಾ ಜೆವ್ನಾಚಿ ತಯಾರಿ ಕರಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:8
12 ತಿಳಿವುಗಳ ಹೋಲಿಕೆ  

ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದರು ಎಂಬ ಸಮಾಚಾರ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಗೆ ತಲುಪಿದ್ದರಿಂದ, ಅವರ ಬಳಿಗೆ ಪೇತ್ರ ಮತ್ತು ಯೋಹಾನರನ್ನು ಕಳುಹಿಸಿದರು.


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.


ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.


ಒಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾರ್ಥನೆಯ ಸಮಯದಲ್ಲಿ ಪೇತ್ರ ಹಾಗೂ ಯೋಹಾನನು ದೇವಾಲಯಕ್ಕೆ ಹೋದರು.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


ಅವರು ಯೇಸುವಿಗೆ, “ನಾವು ಎಲ್ಲಿ ಸಿದ್ಧಮಾಡಬೇಕು?” ಎಂದರು.


ಅವನು ಪೇತ್ರ, ಯೋಹಾನರು ದೇವಾಲಯದೊಳಗೆ ಪ್ರವೇಶಿಸುತ್ತಿರುವುದನ್ನು ಕಂಡು, ಭಿಕ್ಷೆ ಬೇಡಿದನು.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು