Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:19 - ಕನ್ನಡ ಸಮಕಾಲಿಕ ಅನುವಾದ

19 ಬರಬ್ಬನು ಪಟ್ಟಣದಲ್ಲಿ ನಡೆದ ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಗರದಲ್ಲಿ ದಂಗೆ ಎಬ್ಬಿಸಿದ ಹಾಗೂ ಕೊಲೆಮಾಡಿದ ಕಾರಣ ಸೆರೆಯಲ್ಲಿ ಹಾಕಲಾಗಿದ್ದ ಬರಬ್ಬನೇ ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ನಿವಿುತ್ತವಾಗಿಯೂ ಕೊಲೆಯ ನಿವಿುತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 (ಬರಬ್ಬನು ಪಟ್ಟಣದಲ್ಲಿ ದಂಗೆ ಎಬ್ಬಿಸಿದ್ದರಿಂದ ಸೆರೆಮನೆಯಲ್ಲಿದ್ದನು. ಅವನು ಕೆಲವು ಜನರನ್ನು ಕೊಂದಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಶಾರಾತ್ ಎಕ್ ಡಂಗೊ ಉಟ್ವಲ್ಲ್ಯಾ‍ಸಾಟ್ನಿ, ಅನಿ ಲೊಕಾಕ್ನಿ ಜಿವಾನಿ ಮಾರಲ್ಲ್ಯಾ ಸಾಟ್ನಿ, ಬಾರಾಬ್ಬಾಸಾಕ್ ಬಂದಿಖಾನ್ಯಾತ್ ಥವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:19
7 ತಿಳಿವುಗಳ ಹೋಲಿಕೆ  

ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.


ಅದಕ್ಕೆ ಅವರು, “ಈತನು ಗಲಿಲಾಯ ಪ್ರಾಂತ ಮೊದಲುಗೊಂಡು ಈ ಸ್ಥಳದವರೆಗೂ ಯೂದಾಯ ಪ್ರಾಂತದ ಎಲ್ಲಾ ಕಡೆಗೂ ಬೋಧಿಸುತ್ತಾ, ಜನರನ್ನು ಕ್ರಾಂತಿಗೆ ಪ್ರೇರೇಪಿಸುತ್ತಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಹೇಳಿದರು.


ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು.


ದಂಗೆ ಮಾಡಿದವರೊಂದಿಗೆ ಬಂಧಿಸಲಾದ ಆ ದಂಗೆಯಲ್ಲಿ ಕೊಲೆಮಾಡಿದ ಬರಬ್ಬನೆಂಬ ಹೆಸರುಳ್ಳವನೊಬ್ಬನು ಸೆರೆಯಲ್ಲಿ ಇದ್ದನು.


ಆಗ ಅವರೆಲ್ಲರೂ ಆ ಕ್ಷಣವೇ, “ಈತನಿಗೆ ಮರಣದಂಡನೆ ವಿಧಿಸಿರಿ, ನಮಗೆ ಬರಬ್ಬನನ್ನು ಬಿಡುಗಡೆಮಾಡು,” ಎಂದು ಬೊಬ್ಬೆಹಾಕಿದರು.


ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಜನರಲ್ಲಿ ಮನವಿ ಮಾಡಿಕೊಂಡನು.


“ಹಾಗಾದರೆ ಕೆಲವು ಸಮಯದ ಹಿಂದೆ ದಂಗೆಯೆಬ್ಬಿಸಿ ನಾಲ್ಕು ಸಾವಿರ ಉಗ್ರಗಾಮಿಗಳನ್ನು ಅರಣ್ಯಕ್ಕೆ ಕರೆದುಕೊಂಡುಹೋದ ಈಜಿಪ್ಟಿನವನು ನೀನಲ್ಲವೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು