ಲೂಕ 23:25 - ಕನ್ನಡ ಸಮಕಾಲಿಕ ಅನುವಾದ25 ಇದಲ್ಲದೆ ಪಿಲಾತನು ಜನರು ಬರಬ್ಬನನ್ನು ಎಂದರೆ, ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಿದವನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನೋ ಅವರ ಇಷ್ಟಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರು ಕೇಳಿಕೊಂಡ ಪ್ರಕಾರ ಕೊಲೆಕಲಹಗಳ ನಿಮಿತ್ತ ಸೆರೆಯಲ್ಲಿದ್ದ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನಾದರೋ ಅವರ ಇಚ್ಛಾನುಸಾರಕ್ಕೆ ಬಿಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ದಂಗೆ ಕೊಲೆಗಳ ನಿವಿುತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು ಯೇಸುವನ್ನು ಅವರ ಚಿತ್ತಾನುಸಾರ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತೆನಿ ಇಚಾರಲ್ಲ್ಯಾ ಡಂಗೊ ಉಟ್ವುನ್, ಅನಿ ಲೊಕಾಕ್ನಿ ಜಿವಾನಿ ಮಾರುನ್ ಬಂದಿಖಾನ್ಯಾತ್ ಹೊತ್ತ್ಯಾಕ್ ತೆನಿ ಸೊಡುನ್ ದಿಲ್ಯಾನ್, ಅನಿ ತುಮ್ಕಾ ಕಾಯ್ ಪಾಜೆ ತೆ ಕರಾ ಮನುನ್ ಜೆಜುಕ್ ತೆಂಚ್ಯಾ ತಾಬೆತ್ ದಿಲ್ಯಾನ್. ಅಧ್ಯಾಯವನ್ನು ನೋಡಿ |