Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:29 - ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ, ‘ಇಗೋ, ಬಂಜೆಯರೂ ಹೆರದವರೂ ಹಾಲು ಕುಡಿಸದವರೂ ಧನ್ಯರು,’ ಎಂದು ಜನರು ಹೇಳುವ ದಿವಸಗಳು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಕಂದರೆ ಬಂಜೆಯರೂ ಬಸುರಾಗದವರೂ ಮೊಲೆಕುಡಿಸದವರೂ ಧನ್ಯರು ಎಂದು ಜನರು ಹೇಳುವ ದಿವಸಗಳು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ‘ಬಂಜೆಯರೇ ಭಾಗ್ಯವಂತರು! ಹೆರದವಳೇ ಹಾಲುಕುಡಿಸದವಳೇ ಭಾಗ್ಯವಂತಳು’ ಎಂದು ಜನರು ಹೇಳುವ ಸಮಯ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಲೊಕಾ ಪೊರಾ ಹೊವನಸಲ್ಲ್ಯಾ ಬಾಯ್ಕೊಮನ್ಸಾಂಚೆ ಕವ್ಡೆ ಬರೆ, ಪೊರಾಕ್ ಜಲಮ್‍ ದಿ ನಸಲ್ಲ್ಯಾಂಚೆ ಕವ್ಡೆ ಬರೆ! ಮನುನ್ ಸಾಂಗ್ತಲೊ ಎಳ್ ಯೆತಾ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:29
9 ತಿಳಿವುಗಳ ಹೋಲಿಕೆ  

ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”


ಆದರೆ ಇವರಿಬ್ಬರಿಗಿಂತಲೂ ಇನ್ನೂ ಹುಟ್ಟದೇ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಶ್ರೇಷ್ಠನು.


ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನೆತ್ತಿ ಅವರಿಗೆ, “ನಿಮ್ಮನ್ನು ಗರ್ಭದಲ್ಲಿ ಹೊತ್ತು, ನಿಮಗೆ ಹಾಲುಣಿಸಿದ ತಾಯಿ ಧನ್ಯಳು,” ಎಂದು ಹೇಳಿದಳು.


ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಪುತ್ರಿಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿ ಅಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು