Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:42 - ಕನ್ನಡ ಸಮಕಾಲಿಕ ಅನುವಾದ

42 ಬಳಿಕ ಅವನು, “ಯೇಸುವೇ, ನೀವು ನಿಮ್ಮ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪುಮಾಡಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯೇಸುವೇ, ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಸಿಕೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅನಿ ಜೆಜುಕ್ “ಜೆಜು, ತಿಯಾ ರಾಜಾಚಿ ಪದ್ವಿ ಘೆವ್ನ್ ಯೆತಾನಾ, ಮಾಜಿ ಯಾದ್ ಕರ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:42
20 ತಿಳಿವುಗಳ ಹೋಲಿಕೆ  

“ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.


“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.


“ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ಆಗ ತೋಮನು, “ನನ್ನ ಕರ್ತ, ನನ್ನ ದೇವರೇ!” ಎಂದನು.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.


ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು