Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:11 - ಕನ್ನಡ ಸಮಕಾಲಿಕ ಅನುವಾದ

11 ಅವರಿಗಾದರೋ ಈ ಸ್ತ್ರೀಯರು ಹೇಳಿದ್ದು ಕಟ್ಟು ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರೇಷಿತರಾದರೋ ಇದೆಲ್ಲ ಕಟ್ಟುಕತೆಯೆಂದು ಭಾವಿಸಿ ನಂಬದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ನಂಬಲಿಲ್ಲ; ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಅಪೊಸ್ತಲರು ನಂಬಲಿಲ್ಲ. ಅವರಿಗೆ ಅದು ಹರಟೆಮಾತಾಗಿ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಅಪೊಸ್ತಲಾನಿ ಹ್ಯಾ ಬಾಯ್ಕಾಮನ್ಸಾ ಕಾಯ್ಕಿ ನಸಲ್ಲೆಚ್ ಸಾಂಗುಕ್ ಲಾಗ್ಲ್ಯಾತ್ ಮನುನ್ ಯವಜ್ಲ್ಯಾನಿ, ಅನಿ ತೆನಿ ಸಾಂಗಟಲ್ಲೆ ಖರೆ ಮನುನ್ ಮಾನುನ್ ಘೆವ್ಕ್‌ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:11
10 ತಿಳಿವುಗಳ ಹೋಲಿಕೆ  

ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ, ಶಿಷ್ಯರು ನಂಬಲಿಲ್ಲ.


ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!


ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.


ನಾನು ಕರೆಯಲು ದೇವರು ನನಗೆ ಉತ್ತರ ಕೊಟ್ಟರೂ, ನನ್ನ ವಿಜ್ಞಾಪನೆಗೆ ದೇವರು ಕಿವಿಗೊಡುವರೆಂದು ನಾನು ನಂಬುತ್ತಿರಲಿಲ್ಲ.


ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.


ಪೇತ್ರನು ಸೆರೆಮನೆಯಿಂದ ಹೊರಗೆ ಅವನನ್ನು ಹಿಂಬಾಲಿಸಿ ಹೊರಟನು. ದೇವದೂತನು ಮಾಡುತ್ತಿರುವುದು ನಿಜವಾಗಿಯೂ ನಡೆಯುತ್ತಿದೆ ಎಂಬುದು ಅವನಿಗೆ ತಿಳಿಯಲಿಲ್ಲ. ತಾನು ದರ್ಶನ ಕಾಣುತ್ತಿರುವೆನೋ ಎಂದು ಭಾವಿಸಿದನು.


ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.


ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಇವರನ್ನೂ ಅವರು ನಂಬಲಿಲ್ಲ.


ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.


ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರುವಾಗ ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು