Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:36 - ಕನ್ನಡ ಸಮಕಾಲಿಕ ಅನುವಾದ

36 ಅವರೆಲ್ಲರೂ ಹೀಗೆ ಮಾತನಾಡುತ್ತಿರುವಾಗ, ಯೇಸು ತಾವೇ ಅವರ ನಡುವೆ ನಿಂತು ಅವರಿಗೆ, “ನಿಮಗೆ ಸಮಾಧಾನವಾಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅವರು ವರದಿಮಾಡುತ್ತಿದ್ದಂತೆ ಯೇಸುಸ್ವಾಮಿಯೇ ಅವರ ಮಧ್ಯೆ ಪ್ರತ್ಯಕ್ಷವಾಗಿ ನಿಂತು, ‘ನಿಮಗೆ ಶಾಂತಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವರು ಈ ಸಂಗತಿಯನ್ನು ಕುರಿತು ಮಾತಾಡುತ್ತಿರುವಾಗ ಆತನೇ ಅವರ ನಡುವೆ ನಿಂತು [- ನಿಮಗೆ ಮನಶ್ಶಾಂತಿಯಾಗಲಿ ಎಂದು ಅವರಿಗೆ ಹೇಳಿದನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅವರಿಬ್ಬರೂ ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಯೇಸುವು ಶಿಷ್ಯರ ಗುಂಪಿನ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ನಿಮಗೆ ಶಾಂತಿಯಾಗಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತೆನಿ ದೊಗೆ ಜಾನಾ ಹೆ ಸಗ್ಳೆ ತೆಂಕಾ ಸಾಂಗ್ತಾ ಸಾಂಗ್ತಾನಾಚ್ ಜೆಜು ತೆಂಚ್ಯಾ ಮದ್ದಿ ಇಬೆ ರ್‍ಹಾಲೊ, ಅನಿ “ ಸಮಾದಾನ್ ತುಮ್ಕಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:36
13 ತಿಳಿವುಗಳ ಹೋಲಿಕೆ  

ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.


“ನೀವು ಯಾವ ಮನೆಯನ್ನಾದರೂ ಪ್ರವೇಶಿಸುವಾಗ ಮೊದಲು, ‘ಈ ಮನೆಗೆ ಸಮಾಧಾನವಾಗಲಿ,’ ಎಂದು ಹೇಳಿರಿ.


ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.


ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.


ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,


ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.


ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.


ಆ ಮನೆಯು ಅಯೋಗ್ಯವಾಗಿದ್ದರೆ, ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.


ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.


ತರುವಾಯ ಕ್ರಿಸ್ತ ಯೇಸು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು