Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:41 - ಕನ್ನಡ ಸಮಕಾಲಿಕ ಅನುವಾದ

41 ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರುವಾಗ ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, “ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆದರೆ ಅವರು ಸಂತೋಷದ ದೆಸೆಯಿಂದ ಇನ್ನೂ ನಂಬದೆ ಆಶ್ಚರ್ಯಪಡುತ್ತಿರಲಾಗಿ ಆತನು - ತಿನ್ನತಕ್ಕ ಪದಾರ್ಥವೇನಾದರೂ ಇಲ್ಲಿ ನಿಮಗುಂಟೋ ಎಂದು ಅವರನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 . ತೆಂಕಾ ಲೈ ಕುಶಿ ಹೊಲಿ ಅನಿ ಅಜಾಪ್ ಹೊಲೆ; ಅಜುನ್‍ಬಿ ತೆಂಕಾ ವಿಶ್ವಾಸ್ ಹೊವ್ಕ್ ನತ್ತೊ. ತೆಚೆಸಾಟ್ನಿ ತೆನಿ ತೆಂಕಾ,“ತುಮ್ಚ್ಯಾಕ್ಡೆ ಕಾಯ್ ತರ್ ಖಾವ್ಕ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:41
14 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ಮಕ್ಕಳೇ, ನಿಮ್ಮ ಬಳಿಯಲ್ಲಿ ಮೀನುಗಳಿವೆಯೋ?” ಎಂದು ಕೇಳಲು, ಅವರು ಯೇಸುವಿಗೆ, “ಇಲ್ಲ,” ಎಂದು ಉತ್ತರಕೊಟ್ಟರು.


ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.


ನಾನು ಕರೆಯಲು ದೇವರು ನನಗೆ ಉತ್ತರ ಕೊಟ್ಟರೂ, ನನ್ನ ವಿಜ್ಞಾಪನೆಗೆ ದೇವರು ಕಿವಿಗೊಡುವರೆಂದು ನಾನು ನಂಬುತ್ತಿರಲಿಲ್ಲ.


ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ, ಶಿಷ್ಯರು ನಂಬಲಿಲ್ಲ.


ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಇವರನ್ನೂ ಅವರು ನಂಬಲಿಲ್ಲ.


ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.


ಅವರಿಗಾದರೋ ಈ ಸ್ತ್ರೀಯರು ಹೇಳಿದ್ದು ಕಟ್ಟು ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.


ಹೀಗೆ ಯೇಸು ಮಾತನಾಡಿದ ಮೇಲೆ, ತನ್ನ ಕೈಗಳನ್ನು ತನ್ನ ಕಾಲುಗಳನ್ನು ಅವರಿಗೆ ತೋರಿಸಿದರು.


ಅವರು ಯೇಸುವಿಗೆ ಒಂದು ತುಂಡು ಸುಟ್ಟ ಮೀನನ್ನು ಕೊಟ್ಟರು.


ಪೇತ್ರನ ಧ್ವನಿಯನ್ನು ಗುರುತಿಸಿ ಸಂತೋಷದಿಂದ ಕೂಡಿದವಳಾಗಿ ಬಾಗಿಲು ತೆರೆಯದೆ ಹಿಂದೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿಯಲ್ಲಿದ್ದಾನೆ!” ಎಂದು ತಿಳಿಸಿದಳು.


ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚುವಂತೆ ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು