Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:46 - ಕನ್ನಡ ಸಮಕಾಲಿಕ ಅನುವಾದ

46 ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಅನಿ ತೆಂಕಾ,“ ಅಶೆ ಲಿವಲ್ಲೆ ಹಾಯ್; ಮೆಸ್ಸಿಯಾ ಕಸ್ಟ್ ಸೊಸುಕ್ ಪಾಜೆ ಅನಿ ತಿನ್ ದಿಸಾಂಚ್ಯಾ ಮಾನಾ ಝಿತ್ತೊ ಹೊವ್ನ್ ಉಟುನ್ ಯೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:46
11 ತಿಳಿವುಗಳ ಹೋಲಿಕೆ  

ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


‘ಮನುಷ್ಯಪುತ್ರನಾದ ನಾನು ಪಾಪಿಷ್ಠರ ಕೈಗೆ ಒಪ್ಪಿಸಿದವನಾಗಿ, ಶಿಲುಬೆಗೆ ಹಾಕಲಾಗಿ ಮೂರನೆಯ ದಿನದಲ್ಲಿ ತಿರುಗಿ ಜೀವಂತನಾಗಿ ಏಳುವೆನು,’ ಎಂದು ನಿಮಗೆ ಹೇಳಿದ್ದನ್ನು ನೀವು ನೆನಪುಮಾಡಿಕೊಳ್ಳಿರಿ,” ಎಂದರು.


ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


ಯೇಸು ಸತ್ತವರೊಳಗಿಂದ ಪುನಃ ಎದ್ದು ಬರಬೇಕು ಎಂಬ ಪವಿತ್ರ ವೇದದ ವಾಕ್ಯವು ಅವರಿಗೆ ಇನ್ನೂ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು