ಲೂಕ 24:47 - ಕನ್ನಡ ಸಮಕಾಲಿಕ ಅನುವಾದ47 ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47-48 ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಅನಿ ತೆಚ್ಯಾ ನಾವಾನ್ ಸಗ್ಳ್ಯಾ ದೆಶಾಕ್ನಿ ಪಾಪಾಚೆ ಜಿವನ್ ಬದ್ಲುಕ್,ಅನಿ ಪಾಪಾಂಚಿ ಮಾಪಿ ಗಳ್ಸುನ್ ಘೆವ್ಕ್, ಬರಿ ಖಬರ್ ಸಾಂಗುಕ್ ಪಾಜೆ, ಹೆ ಕಾಮ್ ಜೆರುಜಲೆಮಾತ್ನಾ ಚಾಲು ಹೊತಾ.”ಮನುನ್ ಲಿವಲ್ಲೆ ಹಾಯ್. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.