Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:49 - ಕನ್ನಡ ಸಮಕಾಲಿಕ ಅನುವಾದ

49 ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಅನಿ ಮಿಯಾ ಮಾಜ್ಯಾ ಬಾಬಾನ್ ತುಮ್ಕಾ ಗೊಸ್ಟ್ ದಿಲ್ಲೆ ಧಾಡುನ್ ದಿತಾ, ಖರೆ “ತುಮಿ ವೈನಾ ತುಮ್ಚೆ ವರ್‍ತಿ ತೊ ಬಳ್ ಉತ್ರುನ್ ಯೆಯ್ ಪತರ್ ಜೆರುಜಲೆಮಾತುಚ್ ರ್‍ಹಾವ್ಕ್ ಪಾಜೆ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:49
12 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.


“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.


ಮೂಸ್ಯದ ಸೀಮೆಯನ್ನು ತಲುಪಿದಾಗ ಬಿಥೂನ್ಯವನ್ನು ಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಅನುಮತಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು