Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:14 - ಕನ್ನಡ ಸಮಕಾಲಿಕ ಅನುವಾದ

14 ಅದರಂತೆಯೇ ಸೈನಿಕರು, “ನಾವೇನು ಮಾಡಬೇಕು?” ಎಂದು ಕೇಳಿದರು. ಅದಕ್ಕೆ ಯೋಹಾನನು, “ಯಾರನ್ನೂ ಬೆದರಿಸಿ ಹಣ ತೆಗೆದುಕೊಳ್ಳಬೇಡಿರಿ. ಯಾರ ಮೇಲೆಯೂ ಸುಳ್ಳು ದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಿಪಾಯಿಗಳು ಸಹ ಬಂದು - ನಾವು ಏನು ಮಾಡಬೇಕು ಎಂದು ಅವನನ್ನು ಕೇಳಿದಾಗ ಅವನು ಅವರಿಗೆ - ಯಾರನ್ನಾದರೂ ಬೆದರಿಸಬೇಡಿರಿ; ಯಾರ ಮೇಲಾದರೂ ಸುಳ್ಳುದೂರು ತಂದು ದುಡ್ಡು ಕಸಕೊಳ್ಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಉಲ್ಲಿ ಸೈನಿಕಾಬಿ ಯೆಲಿ ಅನಿ “ಅಮ್ಚ್ಯಾ ವಿಶಯಾತ್ ಕಾಯ್ ಮನ್ತೆ? ಅಮಿ ಕಾಯ್ ಕರುಚೆ”, ಮನುನ್ ಇಚಾರ್‍ಲ್ಯಾನಿ. ತೆನಿ ತೆಂಕಾ “ಒತ್ತಾಯ್ ಕರುನ್ ಧಮ್ಕಿ ದಿವ್ನ್ ಕೊನಾಕ್ನಾಬಿ ಪೈಸೆ ಕಾಡುನ್ ಘೆವ್‍ನಕಾಶಿ, ನಾಹೊಲ್ಯಾರ್ ಕೊನಾ ವರ್‍ತಿಬಿ ಝುಟೆ ಅಪ್ವಾದ್ ಘಾಲುನಕಾಶಿ,ತುಮ್ಕಾ ಕವ್ಡೊ ಪಗಾರ್ ದಿತ್ಯಾತ್ ತ್ಯಾತುರುಚ್ ಕುಶಿ ಹೊವಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:14
15 ತಿಳಿವುಗಳ ಹೋಲಿಕೆ  

ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.


ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ.


“ ‘ಕದಿಯಬಾರದು. “ ‘ಸುಳ್ಳಾಡಬಾರದು. “ ‘ಒಬ್ಬರಿಗೊಬ್ಬರು ಮೋಸಮಾಡಬಾರದು.


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುರುದ್ದೇಶಪೂರಿತ ಸಾಕ್ಷಿಯಾಗುವ ಮೂಲಕ ದುಷ್ಟರಿಗೆ ಸಹಾಯಮಾಡಬೇಡ.


ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು.


ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು,


ಯೇಸು ಕಪೆರ್ನೌಮಿಗೆ ಪ್ರವೇಶಿಸಿದಾಗ, ಒಬ್ಬ ಶತಾಧಿಪತಿಯು ಅವರ ಬಳಿಗೆ ಬಂದು,


ಆಗ ಜನರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಕೇಳಿದರು.


ಅದಕ್ಕೆ ಯೋಹಾನನು ಅವರಿಗೆ, “ನಿಮಗೆ ಆಜ್ಞಾಪಿಸಿದ್ದಕ್ಕಿಂತ ಹೆಚ್ಚೇನೂ ವಸೂಲಿ ಮಾಡಬೇಡಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು