Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:7 - ಕನ್ನಡ ಸಮಕಾಲಿಕ ಅನುವಾದ

7 ಆಗ ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ, ಯೋಹಾನನು, “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೊವಾನ್ನನ ಬಳಿಗೆ ಸ್ನಾನದೀಕ್ಷೆ ಪಡೆಯಲು ಜನರು ಗುಂಪುಗುಂಪಾಗಿ ಬರುತ್ತಿದ್ದರು. ಆತನು ಅವರಿಗೆ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆಕೊಟ್ಟವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲಾಗಿ ಅವನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವದಕ್ಕಾಗಿ ಹೊರಟುಬಂದ ಜನರ ಗುಂಪುಗಳಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೂ ಉಪದೇಶ ಮಾಡಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರಿಗೆ. “ನೀವು ವಿಷಕರವಾದ ಹಾವುಗಳಂತಿದ್ದೀರಿ! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಾಂಡ್ಯಾನಿ ಲೊಕಾ ಜುವಾಂವಾಕ್ಡೆ ಯೆಲಿ, ಅನಿ ತೆನಿ ತೆಂಕಾ ಬಾಲ್ತಿಮ್ ದಿಲ್ಯಾನ್. ಜುವಾಂವಾಕ್ ತೆಂಕಾ “ತುಮಿ ಕುಸ್ಡ್ಯಾಸಾಪಾಚ್ಯಾ ಪಿಳ್ಗಿ ಸಾರ್‍ಕೆ ಹಾಸಿ! ದೆವಾನ್ ದಿತಲ್ಯಾ ಶಿಕ್ಷಾತ್ನಾ ಚುಕ್ವುನ್ ಘೆವ್ಕ್ ಹೊತಾ, ಮನುನ್ ತುಮ್ಕಾ ಕೊನ್ ಉಶಾರ್ಕಿ ದಿಲಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:7
12 ತಿಳಿವುಗಳ ಹೋಲಿಕೆ  

“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.


ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


ಹಾವಿನಂತೆ ಮೊಟ್ಟೆಗಳನ್ನು ಮರಿಮಾಡುತ್ತಾರೆ. ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ. ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು. ಒಡೆದುಬಿಡುವವನಿಗೆ ವಿಷದ ಮರಿ ಹೊರಡುವುದು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು