Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:1 - ಕನ್ನಡ ಸಮಕಾಲಿಕ ಅನುವಾದ

1 ಯೇಸು ಪವಿತ್ರಾತ್ಮಭರಿತರಾಗಿ, ಯೊರ್ದನ್ ನದಿ ತೀರದಿಂದ ಹಿಂದಿರುಗಿ ಬಂದು, ದೇವರಾತ್ಮರಿಂದ ಅರಣ್ಯದೊಳಕ್ಕೆ ಮಾರ್ಗದರ್ಶನ ಹೊಂದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಪವಿತ್ರಾತ್ಮಭರಿತರಾಗಿ ಜೋರ್ಡನ್ ನದಿತೀರದಿಂದ ಹಿಂದಿರುಗಿದ ಮೇಲೆ ಅದೇ ಆತ್ಮದಿಂದ ಪ್ರೇರಿತರಾಗಿ ಬೆಂಗಾಡು ಪ್ರದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್‍ಹೊಳೆಯಿಂದ ಹಿಂತಿರುಗಿ ದೇವರಾತ್ಮನಿಂದ ನಾಲ್ವತ್ತು ದಿವಸ ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸುವು ಜೋರ್ಡನ್ ನದಿಯಿಂದ ಹಿಂತಿರುಗಿದನು. ಆತನು ಪವಿತ್ರಾತ್ಮಭರಿತನಾಗಿದ್ದನು. ಪವಿತ್ರಾತ್ಮನು ಯೇಸುವನ್ನು ಅಡವಿಗೆ ನಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಪವಿತ್ರ್ ಆತ್ಮ್ಯಾನ್ ಭರುನ್ ಜೊರ್ದಾನ್ ನ್ಹಯಿಕ್ನಾ ಪರ್‍ತುನ್ ಯೆಲೊ,ಅನಿ ಪವಿತ್ರ್ ಆತ್ಮ್ಯಾನ್ ಜೆಜುಕ್ ಹಾಳ್ ಜಾಗ್ಯಾಕ್ ಘೆವ್ನ್ ಗೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:1
19 ತಿಳಿವುಗಳ ಹೋಲಿಕೆ  

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ಯೋಹಾನನು ಸಾಕ್ಷಿಕೊಟ್ಟು, “ಪವಿತ್ರಾತ್ಮರು ಪರಲೋಕದಿಂದ ಪಾರಿವಾಳದಂತೆ ಇಳಿದುಬಂದು ಯೇಸುವಿನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.


ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.


ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.


ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು.


ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.


ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು.


ಅವನು ಯೊರ್ದನ್ ನದಿಯ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು, ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಪಡೆಯುವದರ ಕುರಿತು ಸಾರಿ ಹೇಳಿದನು.


ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ಕಯಿನಾನನು ಎನೋಷನ ಮಗನು, ಎನೋಷನು ಸೇಥನ ಮಗನು, ಸೇತನು ಆದಾಮನ ಮಗನು, ಆದಾಮನು ದೇವರ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು