ಲೂಕ 4:16 - ಕನ್ನಡ ಸಮಕಾಲಿಕ ಅನುವಾದ16 ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್‍ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್‍ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಮಾನಾ ಜೆಜು ಅಪ್ನಿ ಬಾರಿಕ್-ಹೊತ್ತೊ ಮೊಟೊ ಹೊಲ್ಲೆ ಗಾಂವ್ , ನಜರೆತಾಕ್ ಗೆಲೊ, ಅನಿ ಸದ್ದಿಚ್ಯಾ ಬಾಸೆನ್ ಸಿನಾಗೊಗಾತ್ ಗೆಲೊ ಅನಿ ವಾಚ್ವುಕ್ ಇಬೆ ರ್‍ಹಾಲೊ. ಅಧ್ಯಾಯವನ್ನು ನೋಡಿ |