Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:17 - ಕನ್ನಡ ಸಮಕಾಲಿಕ ಅನುವಾದ

17 ಯೇಸುವಿನ ಕೈಗೆ ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಕೊಟ್ಟರು. ಯೇಸು ಅದನ್ನು ಬಿಚ್ಚಿ, ಅದರಲ್ಲಿ ಬರೆದಿರುವ ಈ ವಾಕ್ಯಗಳನ್ನು ಕಂಡು ಓದಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಯೆಶಾಯನೆಂಬ ಪ್ರವಾದಿಯ ಗ್ರಂಥದ ಸುರಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರಳಿಯನ್ನು ಬಿಚ್ಚಿ ಮುಂದೆ ಹೇಳುವ ಮಾತು ಬರೆದಿರುವ ಸ್ಥಳವನ್ನು ಕಂಡು ಓದಿದನು; ಆ ಮಾತೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಆತನಿಗೆ ಓದಲು ಕೊಡಲಾಗಿತ್ತು. ಯೇಸು ಆ ಪುಸ್ತಕವನ್ನು ತೆರೆದು ಈ ಭಾಗವನ್ನು ಓದಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಇಸಾಯಿಯಾ ಪ್ರವಾದ್ಯಾಚೆ ಪುಸ್ತಕ್ ತೆಕಾ ದಿಲ್ಯಾನಿ, ತೆನಿ ತೆ ಉಗಡ್ಲ್ಯಾನ್, ತನ್ನಾ ತೆಕಾ ಅಶೆ ಮನುನ್ ಲಿವಲ್ಲೆ ವಾಚುಕ್ ಗಾವ್ಲೆ, ತೆ ಕಾಯ್ ಮಟ್ಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:17
9 ತಿಳಿವುಗಳ ಹೋಲಿಕೆ  

ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು.


ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.


ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.


ದಾವೀದನು ತಾನೇ ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು


ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು