Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:18 - ಕನ್ನಡ ಸಮಕಾಲಿಕ ಅನುವಾದ

18 “ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪವಿತ್ರ್ ಆತ್ಮೊ ಮಾಜೆ ವರ್‍ತಿ ಹಾಯ್ ಕಶ್ಯಾಕ್ ಮಟ್ಲ್ಯಾರ್ ಗರಿಬಾಕ್ನಿ ಬರಿ ಖಬರ್ ಹಾನುಕ್ ಮನುನ್, ತೆನಿ ಮಾಕಾ ಎಚುನ್ ಕಾಡ್ಲ್ಯಾನಾಯ್. ಗುಲಾಮ್ಗಿರಿತ್ ಹೊತ್ತ್ಯಾಕ್ನಿ ಸುಟ್ಕಾ ಯೆಲಾ, ಅನಿ ಕುಡ್ಡಾಕ್ನಿ ದಿಸ್ಟ್ ಯೆಲಾ ಮನುನ್ ಸಾಂಗುಕ್ ತೆನಿ ಮಾಕಾ ಧಾಡುನ್ ದಿಲ್ಯಾನಾಯ್. ಅಡ್ಚನಿತ್ ಹೊತ್ತ್ಯಾಕ್ನಿ ಸುಟ್ಕಾ ದಿತಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:18
56 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”


ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.


ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, ಅವರ ಗಾಯಗಳನ್ನು ಕಟ್ಟುತ್ತಾರೆ.


ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.


ಯೇಸು ತಮ್ಮ ಶಿಷ್ಯರನ್ನು ನೋಡಿ, ಹೇಳಿದ್ದೇನೆಂದರೆ: “ಬಡವರಾದ ನೀವು ಧನ್ಯರು, ದೇವರ ರಾಜ್ಯವು ನಿಮ್ಮದೇ.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.


ಅವರು ಸೆರೆಯವರ ಗೋಳಾಟವನ್ನು ಕೇಳಿ, ಮರಣದಂಡನೆಗೆ ಪಾತ್ರನಾದವರನ್ನು ಬಿಡಿಸುವರು,


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನೀನು ಬಂಧಿತರಿಗೆ, ‘ಹೊರಗೆ ಬನ್ನಿರಿ,’ ಕತ್ತಲೆಯಲ್ಲಿರುವವರಿಗೆ, ‘ಬೆಳಕಿಗೆ ಬನ್ನಿರಿ,’ ಎಂದು ಹೇಳಬಹುದು. “ಅವರು ದಾರಿಗಳಲ್ಲಿ ಮೇಯಿಸುವರು. ಅವರ ಎಲ್ಲಾ ಎತ್ತರವಾದ ಪ್ರದೇಶಗಳೂ ಕೂಡ ಅವರಿಗೆ ಹುಲ್ಲುಗಾವಲಾಗಿರುವುವು.


ನಾನೇ, ಅವನನ್ನು ನೀತಿಯಲ್ಲಿ ಎಬ್ಬಿಸಿದ್ದೇನೆ. ಅವನ ಮಾರ್ಗಗಳನ್ನು ಸರಾಗ ಮಾಡುತ್ತೇನೆ. ಅವನು ನನ್ನ ಪಟ್ಟಣವನ್ನು ಕಟ್ಟಿ, ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ, ನನ್ನ ಸೆರೆಯವರನ್ನು ಕಳುಹಿಸಿಬಿಡುವನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾನೆ.


ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು.


ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.


ಅಂದ್ರೆಯನು ಮೊದಲು ತನ್ನ ಸಹೋದರ ಸೀಮೋನನನ್ನು ಕಂಡು, “ನಾವು ಮೆಸ್ಸೀಯ ಆಗಿರುವವರನ್ನು ಕಂಡೆವು,” ಎಂದು ಹೇಳಿ,


ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.


ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ. ಮುರಿದಂಥ, ಜಜ್ಜಿದಂಥ ಹೃದಯವನ್ನು ದೇವರು ತಿರಸ್ಕರಿಸುವುದಿಲ್ಲ.


ಅದೇ ದಿವಸದಲ್ಲಿ ಅದು ರದ್ದುಗೊಂಡಿತು. ಆಗ ನನ್ನನ್ನು ನೋಡಿಕೊಳ್ಳುತ್ತಿದ್ದ ಬಡ ಕುರಿ ಮಂದೆಯು, ಅದು ಯೆಹೋವ ದೇವರ ವಾಕ್ಯವೆಂದು ತಿಳಿದುಕೊಂಡಿತು.


“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.


ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,


“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.


ಯೇಸುವಿನ ಕೈಗೆ ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಕೊಟ್ಟರು. ಯೇಸು ಅದನ್ನು ಬಿಚ್ಚಿ, ಅದರಲ್ಲಿ ಬರೆದಿರುವ ಈ ವಾಕ್ಯಗಳನ್ನು ಕಂಡು ಓದಿದರು:


ಕರ್ತ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ ಭೂಲೋಕದ ಅರಸರೂ ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು