Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:25 - ಕನ್ನಡ ಸಮಕಾಲಿಕ ಅನುವಾದ

25 ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರುಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲ್ ಜನರಲ್ಲಿ ಎಷ್ಟೋ ಮಂದಿ ವಿಧವೆಯರು ಇದ್ದದ್ದು ನಿಜ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮಿಯಾ ತುಮ್ಕಾ ಖರೆಚ್ ಸಾಂಗ್ತಾ ಎಲಿಯಾ ಪ್ರವಾದ್ಯಾಚ್ಯಾ ಎಳಾರ್ ಇಸ್ರಾಯೆಲಾತ್ ಲೈ ಘವ್ ನಸಲ್ಲ್ಯಾ ಬಾಯ್ಕಾಮನ್ಸಾ ಹೊತ್ತ್ಯಾ, ಸಾಡೆ ತಿನ್ ವರ್ಸಾ ಪಾವ್ಸ್ ನಸ್ತಾನಾ ಸಗ್ಳ್ಯಾ ದೆಶಾತ್ ಬರಗಾಲ್ ಪಡಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:25
12 ತಿಳಿವುಗಳ ಹೋಲಿಕೆ  

ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.


ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.


ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ದೇವರು ಮೋಶೆಗೆ ಹೇಳಿದ್ದೇನೆಂದರೆ, “ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು.”


ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು