ಲೂಕ 4:27 - ಕನ್ನಡ ಸಮಕಾಲಿಕ ಅನುವಾದ27 ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಎಷ್ಟೋ ಮಂದಿ ಕುಷ್ಠರೋಗಿಗಳು ಇದ್ದಾಗ್ಯೂ ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸುರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಇಸ್ರಾಯೆಲಾತ್ ಕುಸ್ಟ್ ರೊಗಾನಿ ಲೈ ಲೊಕಾ ತರಾಸ್ ಕರುನ್ ಘೆಯ್ತ್, ಖರೆ ಎಲಿಶಾ ಪ್ರವಾದ್ಯಾಚ್ಯಾ ಎಳಾರ್ ಸಿರಿಯಾಚೊ ನಾಮಾನ್ ಮನ್ತಲೊ ಎಕ್ಲೊಚ್ ಆರಾಮ್ ಹೊಲೊ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |