Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:32 - ಕನ್ನಡ ಸಮಕಾಲಿಕ ಅನುವಾದ

32 ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಅವರ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಲ್ಲಿ ಸಬ್ಬತ್‍ದಿನದಲ್ಲಿ ಅವರಿಗೆ ಉಪದೇಶ ಮಾಡುತ್ತಿರಲು ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸುವಿನ ಉಪದೇಶಕ್ಕೆ ಅವರು ಅತ್ಯಾಶ್ಚರ್ಯಪಟ್ಟರು. ಏಕೆಂದರೆ ಆತನು ಅಧಿಕಾರದಿಂದ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಅದಿಕಾರ್‍ಯಾನ್ ಬೊಲ್ತಲೆ ಅನಿ ಶಿಕ್ವುತಲೆ ಆಯ್ಕುನ್ ಲೊಕಾ ಅಜಾಪ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:32
15 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.


ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.


ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕಿರುಚುತ್ತಾ,


ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು