ಲೂಕ 4:38 - ಕನ್ನಡ ಸಮಕಾಲಿಕ ಅನುವಾದ38 ಯೇಸು ಸಭಾಮಂದಿರದಿಂದ ಎದ್ದು ಸೀಮೋನನ ಮನೆಗೆ ಹೋದರು. ಅಲ್ಲಿ ಸೀಮೋನನ ಅತ್ತೆಗೆ ಕಠಿಣ ಜ್ವರವಿದ್ದುದರಿಂದ ಅಲ್ಲಿದ್ದವರು ಆಕೆಗೆ ಸಹಾಯ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಪ್ರಾರ್ಥನಾಮಂದಿರದಿಂದ ಹೊರಟ ಯೇಸುಸ್ವಾಮಿ ಸಿಮೋನನ ಮನೆಗೆ ಬಂದರು. ಆ ಸಿಮೋನನ ಅತ್ತೆ ವಿಷಮಜ್ವರದಿಂದ ನರಳುತ್ತಿದ್ದಳು. ಅಲ್ಲಿದ್ದವರು ಅವಳ ಪರವಾಗಿ ಯೇಸುವಿನಲ್ಲಿ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ಕಠಿನ ಜ್ವರದಿಂದ ಬಹಳ ಕಷ್ಟಪಡುತ್ತಿರಲಾಗಿ ಆಕೆಯ ವಿಷಯದಲ್ಲಿ ಆತನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೇಸು ಸಭಾಮಂದಿರದಿಂದ ಹೊರಟು ಸೀಮೋನನ ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಜೆಜು ಸಿನಾಗೊಗ್ ಸೊಡುನ್ ಸಿಮಾವಾಚ್ಯಾ ಘರಾಕ್ ಗೆಲೊ ಸಿಮಾವಾಚಿ ಮಾಮಿ ತಾಪಾನ್ ಆರಾಮ್ ನಸ್ತಾನಾ ನಿಜಲ್ಲಿ, ಅನಿ ತೆನಿ ತಿಚ್ಯಾ ವಿಶಯಾತ್ ಜೆಜುಕ್ಡೆ ಬೊಲ್ಲ್ಯಾನಿ. ಅಧ್ಯಾಯವನ್ನು ನೋಡಿ |