Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:40 - ಕನ್ನಡ ಸಮಕಾಲಿಕ ಅನುವಾದ

40 ಸಂಜೆಯಾದ ನಂತರ, ನಾನಾ ವಿಧವಾದ ರೋಗಗಳಿಂದ ಅಸ್ವಸ್ಥರಾದವರೆಲ್ಲರನ್ನು ಜನರು ಯೇಸುವಿನ ಬಳಿಗೆ ಕರೆತಂದರು, ಅವರಲ್ಲಿ ಪ್ರತಿಯೊಬ್ಬನ ಮೇಲೆ ಯೇಸು ತಮ್ಮ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಹೊತ್ತು ಮುಣುಗುವಾಗ ಆದದ್ದೇನಂದರೆ ಯಾರಾರ ಮನೆಯಲ್ಲಿ ತರತರದ ರೋಗಗಳಿಂದ ಅಸ್ವಸ್ಥವಾದವರಿದ್ದರೋ ಅವರೆಲ್ಲರು ಆ ರೋಗಿಗಳನ್ನು ಆತನ ಹತ್ತಿರಕ್ಕೆ ಕರಕೊಂಡು ಬಂದರು; ಆತನು ಪ್ರತಿಯೊಬ್ಬನ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ದಿಸ್ ಬುಡಲ್ಲ್ಯಾ ತನ್ನಾ ಲೊಕಾನಿ ಅಪ್ನಾಚ್ಯಾ ಶಿಕ್ ಹೊತ್ತ್ಯಾ ದೊಸ್ತಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ತೆಂಕಾ ದುಸ್ರಿ-ದುಸ್ರಿ ಲೈ ರೊಗಾ ಹೊತ್ತಿ ತೆಂಚ್ಯಾ ಸಗ್ಳ್ಯಾಂಚ್ಯಾ ವರ್‍ತಿ ಜೆಜುನ್ ಹಾತ್ ಥವ್ಲ್ಯಾನ್, ಅನಿ ತೆಂಕಾ ಗುನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:40
12 ತಿಳಿವುಗಳ ಹೋಲಿಕೆ  

“ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.


ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು.


ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.


ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ನುಗ್ಗುತ್ತಿದ್ದರು.


ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು