Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:5 - ಕನ್ನಡ ಸಮಕಾಲಿಕ ಅನುವಾದ

5 ಸೈತಾನನು ಯೇಸುವನ್ನು ಎತ್ತರವಾದ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಅವರಿಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಪಿಶಾಚಿ ಯೇಸುವನ್ನು ಎತ್ತರಕ್ಕೆ ಕರೆದೊಯ್ದು ಪ್ರಪಂಚದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬಳಿಕ ಸೈತಾನನು ಆತನನ್ನು ಮೇಲಕ್ಕೆ ಕರೆದುಕೊಂಡು ಹೋಗಿ ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಸೈತಾನನು ಯೇಸುವನ್ನು ಕರೆದುಕೊಂಡು ಹೋಗಿ, ಒಂದೇ ಕ್ಷಣದಲ್ಲಿ ಭೂಲೋಕದ ಎಲ್ಲಾ ರಾಜ್ಯಗಳನ್ನು ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಸೈತಾನಾನ್ ಜೆಜುಕ್ ಮಡ್ಡಿ ವೈರ್ ಘೆವ್ನ್ ಜಾವ್ನ್, ಹ್ಯಾ ಜಗಾತ್ಲೆ ಸಗ್ಳೆ ರಾಜ್ವಾಡೆ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:5
11 ತಿಳಿವುಗಳ ಹೋಲಿಕೆ  

ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.


ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.


ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,


ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.


ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು