Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:10 - ಕನ್ನಡ ಸಮಕಾಲಿಕ ಅನುವಾದ

10 ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸೀಮೋನನ ಪಾಲುಗಾರರಾಗಿದ್ದಂಥ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯಪಟ್ಟರು. ಯೇಸು ಸೀಮೋನನಿಗೆ - ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವವನಾಗಿರುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಆಶ್ಚರ್ಯಪಟ್ಟರು. (ಇವರಿಬ್ಬರೂ ಸೀಮೋನನ ಪಾಲುಗಾರರಾಗಿದ್ದರು.) ಯೇಸು ಸೀಮೋನನಿಗೆ, “ಭಯಪಡಬೇಡ. ಇಂದಿನಿಂದ ನೀನು ಮೀನನ್ನು ಹಿಡಿಯದೆ, ಮನುಷ್ಯರನ್ನು ಒಟ್ಟುಗೂಡಿಸಲು ದುಡಿಯುವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಮಟ್ಲ್ಯಾರ್, ಜೆಬೆದೆವಾಚಿ ಪೊರಾ ಜಾಕೊಬ್ ಅನಿ ಜುವಾಂವುಚ್ ಸಿಮಾವಾಚೆ ವಾಂಗ್ಡಿ ಹೊವ್ನ್ ಹೊತ್ತೆ. ಜೆಜುನ್ ಸಿಮಾವಾಕ್ “ಭಿಂವ್ನಕೊ ಹಿತ್ನಾ ಫಿಡೆ ತಿಯಾ ಲೊಕಾಕ್ನಿ ದೆವಾಚ್ಯಾ ರಾಜಾಕ್ ಬಲ್ವುನ್ ಹಂತಲೊ ಮಾನುಸ್ ಹೊತೆ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:10
14 ತಿಳಿವುಗಳ ಹೋಲಿಕೆ  

“ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.


ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.


ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.


ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.


ತೀತನು ನನ್ನ ಸಹೋದ್ಯೋಗಿ ಮತ್ತು ನಿಮ್ಮ ನಡುವೆಯಿರುವ ನನ್ನ ಸಹಕಾರಿಯಾಗಿರುತ್ತಾನೆ. ಇವನ ಸಂಗಡ ಬರುತ್ತಿರುವ ನಮ್ಮ ಸಹೋದರರು ಸಭೆಗಳ ಪ್ರತಿನಿಧಿಗಳಾಗಿದ್ದಾರೆ ಮತ್ತು ಕ್ರಿಸ್ತ ಯೇಸುವಿನ ಮಹಿಮೆಗೆ ಕಾರಣಸ್ಥರೂ ಆಗಿದ್ದಾರೆ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.


ಅವರು ಯಾರೆಂದರೆ: ಪೇತ್ರನೆಂದು ಹೆಸರು ಹೊಂದಿದ ಸೀಮೋನ, ಅವನ ಸಹೋದರ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,


ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುವಿನ ಬಳಿಗೆ ಬಂದು, ಅವರ ಮುಂದೆ ಮೊಣಕಾಲೂರಿ ಬೇಡಿಕೊಂಡಳು.


ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.


ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನನನ್ನು ಕಂಡರು. ಅವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಅವರನ್ನೂ ಕರೆದರು.


ಯಾಕಂದರೆ, ಅವರು ಹಿಡಿದ ಮೀನುಗಳ ರಾಶಿಯನ್ನು ಕಂಡು ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.


ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಅವರ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.


ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು