Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕ ಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾನಾ ಜೆಜುನ್ ತ್ಯಾ ಮಾನ್ಸಾಕ್ “ಕೊನಾಕ್ಬಿ ಸಾಂಗುನಕ್ಕೊ, ಖರೆ ಯಾಜಕಾಕ್ಡೆ ಜಾ ಅನಿ ತುಕಾಚ್ ತೆಕಾ ದಾಕ್ವು, ಮಾನಾ ಸಗ್ಳ್ಯಾಕ್ನಿ ತಿಯಾ ಶುದ್ದ್ ಹೊಲೆ ಮನುನ್ ದಾಕ್ವುಸಾಟ್ನಿ ಮೊಯ್ಜೆನ್ ಸಾಂಗಟಲ್ಲಿ ಬಲಿ ಭೆಟ್ವು” ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:14
12 ತಿಳಿವುಗಳ ಹೋಲಿಕೆ  

ಯೇಸು ಅವರನ್ನು ನೋಡಿ, “ಹೋಗಿ, ಯಾಜಕರಿಗೆ ನಿಮ್ಮನ್ನು ತೋರಿಸಿಕೊಳ್ಳಿರಿ,” ಎಂದರು. ಅವರು ಹೋಗುತ್ತಿರುವಾಗಲೇ ಸ್ವಸ್ಥರಾದರು.


ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.


ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು.


ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು.


“ಒಬ್ಬ ಮನುಷ್ಯನು ತನ್ನ ಚರ್ಮದ ಮೇಲೆ ಬಾವಾಗಲಿ, ಕಜ್ಜಿಯಾಗಲಿ, ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಚರ್ಮದಲ್ಲಿ ಕುಷ್ಠದ ವ್ಯಾಧಿಯಂತಿದ್ದರೆ, ಅವನು ಯಾಜಕನಾದ ಆರೋನನ ಬಳಿಗಾದರೂ ಇಲ್ಲವೆ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗಾದರೂ ಕರೆದುಕೊಂಡು ಬರಬೇಕು.


ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.


ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಅಥವಾ ನಿಮ್ಮ ಮಾತುಗಳನ್ನು ಕೇಳದಿದ್ದರೆ, ನೀವು ಹೊರಡುತ್ತಿರುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.


ಆ ಬಟ್ಟೆ ತೊಗಲು ಹಾಸು ಇಲ್ಲವೆ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ, ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಬೂಜಾಗಿದೆ. ಅದನ್ನು ಯಾಜಕನಿಗೆ ತೋರಿಸಬೇಕು.


ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು