Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:35 - ಕನ್ನಡ ಸಮಕಾಲಿಕ ಅನುವಾದ

35 ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ. ಆ ಕಾಲದಲ್ಲೇ ಉಪವಾಸ ಮಾಡುವರು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದರೆ ಮದುಮಗನು ಅವರ ಬಳಿಯಿಂದ ಹೊರಟುಹೋಗುವ ಕಾಲ ಬರುತ್ತದೆ. ಆಗ ಅವನ ಸ್ನೇಹಿತರು ಉಪವಾಸ ಮಾಡುವರು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಖರೆ ನ್ಹವ್ರ್ಯಾಕ್ ತೆಂಚ್ಯಾ ಮದ್ನಾ ಕಾಡುನ್ ಘೆವ್ನ್ ಜಾತಲೊ ದಿಸ್ ಯೆತಾ, ತನ್ನಾ ತೆನಿ ಉಪಾಸ್ ಕರ್‍ತ್ಯಾತ್”, ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:35
23 ತಿಳಿವುಗಳ ಹೋಲಿಕೆ  

ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿ ಒಂದನ್ನು ಕಾಣಬೇಕೆಂದು ನೀವು ಬಯಸುವ ಕಾಲ ಬರುತ್ತದೆ, ಆದರೂ ನೀವು ಅದನ್ನು ಕಾಣುವುದಿಲ್ಲ.


ನಾನು ಪ್ರಯಾಸಪಟ್ಟು ಮೈಮುರಿದು ಕೆಲಸ ಮಾಡಿದೆನು. ಎಷ್ಟೋ ಬಾರಿ ನಿದ್ರೆಗೆಟ್ಟೆನು. ಹಸಿವೆ ಬಾಯಾರಿಕೆಗಳೇನೆಂಬುದನ್ನು ಅರಿತೆನು. ಊಟವಿಲ್ಲದೆ ಎಷ್ಟೋ ಬಾರಿ ಉಪವಾಸ ಬಿದ್ದೆನು. ಸರಿಯಾದ ಬಟ್ಟೆ ಇಲ್ಲದೆ ಚಳಿಯಲ್ಲಿ ಬಹಳವಾಗಿ ಸಂಕಟಪಟ್ಟೆನು.


ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.


ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.


ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.


ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.


ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು.


“ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮೊಡನೆ ಇರುತ್ತೇನೆ. ‘ನೀವು ನನ್ನನ್ನು ಹುಡುಕುವಿರಿ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದಿ ನಾಯಕರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.


ಏಕೆಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ,” ಎಂದರು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು.


ಅದಕ್ಕೆ ಯೇಸು, “ಮದುಮಗನು ಮದುವೆ ಅತಿಥಿಗಳ ಸಂಗಡವಿರುವಾಗ ಅವರನ್ನು ಉಪವಾಸವಿರಿಸಲಾದೀತೆ?


ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು