Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:36 - ಕನ್ನಡ ಸಮಕಾಲಿಕ ಅನುವಾದ

36 ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನಂದರೆ - ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ಹರಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವದಿಲ್ಲ; ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವದಲ್ಲದೆ ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೇದಕ್ಕೆ ಒಪ್ಪುವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಬಳಿಕ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಹಳೆ ಅಂಗಿಗೆ ತೇಪೆ ಹಚ್ಚುವುದಕ್ಕಾಗಿ ಹೊಸ ಅಂಗಿಯಿಂದ ಬಟ್ಟೆಯನ್ನು ಯಾರೂ ಹರಿದುಕೊಳ್ಳುವುದಿಲ್ಲ. ಹಾಗೆ ಮಾಡಿದ್ದೇಯಾದರೆ, ಹೊಸ ಅಂಗಿಯನ್ನು ಕೆಡಿಸಿಕೊಂಡಂತಾಗುತ್ತದೆ. ಅಲ್ಲದೆ ಹೊಸ ಅಂಗಿಯ ಬಟ್ಟೆಯು ಹಳೆ ಅಂಗಿಗೆ ಹೋಲುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಅನಿ ಜೆಜುನ್ ತೆಂಕಾ ಎಕ್ ಕಾನಿಬಿ ಸಾಂಗ್ಲ್ಯಾನ್ “ಎಕ್ ಜುನ್ನ್ಯಾ ಪಿಂಜಲ್ಲ್ಯಾ ಅಂಗಿಕ್ ಲಾವುನ್ ಶಿವುಕ್ ಮನುನ್, ನ್ಹವ್ಯಾ ಅಂಗಿಚೊ ತುಕ್ಡೊ ಕೊನ್ ಬಿ ಕಾತ್ರುನ್ ಕಾಡಿನಾ. ತೆನಿ ತಸೆ ಕರ್ಲ್ಯಾರ್, ತೊ ನ್ಹವಿ ಅಂಗಿ ಪಿಂಜ್ತಾ, ಅನಿ ತೊ ನ್ಹವೊ ತುಕ್ಡೊ ಜುನ್ನ್ಯಾ ಅಂಗಿಕ್ ಲಾವಲ್ಲೊ ಬರಬ್ಬರ್ ದಿಸಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:36
7 ತಿಳಿವುಗಳ ಹೋಲಿಕೆ  

ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ನಾರು ಮತ್ತು ಉಣ್ಣೆ ಎರಡೂ ಕೂಡಿರುವ ಬಟ್ಟೆಯನ್ನೂ ಧರಿಸಬಾರದು.


“ ‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “ ‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “ ‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “ ‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.


ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು.


ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಒಡೆದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು