ಲೂಕ 5:7 - ಕನ್ನಡ ಸಮಕಾಲಿಕ ಅನುವಾದ7 ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಪಾಲುಗಾರರಿಗೆ - ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು ಅವು ಮುಳುಗುವ ಹಾಗಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಮೀನುಗಳನ್ನು ತುಂಬಿಸಲು ದೋಣಿಗಳೆರಡೂ ಮುಳುಗುವಂತಾದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಸೆ ಮನುನ್, ತೆನಿ ಸೊನ್ನಿ ಕರುನ್, ಅನಿದುಸ್ರ್ಯಾ ಢೊನಿತ್ಲ್ಯಾಕ್ನಿಬಿ ಬಲ್ವುಲ್ಯಾನಿ, ತೆನಿಬಿ ಯೆಲ್ಯಾನಿ ಅನಿ ದೊನಿಬಿ ಢೊನಿಯಾತ್ನಿ ಮಾಸೊಳ್ಯಾ ಭರ್‍ಲ್ಯಾನಿ, ದೊನಿಬಿ ಢೊನಿಯಾ ಬುಡುಕ್ ಯೆಲ್ಲ್ಯಾ. ಅಧ್ಯಾಯವನ್ನು ನೋಡಿ |