Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:42 - ಕನ್ನಡ ಸಮಕಾಲಿಕ ಅನುವಾದ

42 ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೀನು ತೆಗೆಯದೆ ನಿನ್ನ ಸಹೋದರನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯುತ್ತೇನೆ,’ ಎಂದು ನೀನು ಹೇಳುವುದು ಹೇಗೆ? ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು, ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನೇ ನೀನು ನೋಡದೆ ನಿನ್ನ ಸಹೋದರನಿಗೆ - ಅಣ್ಣಾ, ನಿನ್ನ ಕಣ್ಣಿನೊಳಗಿನ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ, ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನೀನು ಅವನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ’ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ. ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅಶೆ ರಾತಾನಾ ತುಜ್ಯಾ ಡೊಳ್ಯಾತ್ಲೊ ಮೊಟೊ ನಾಕ್ಡಾಚೊ ತುಕ್ಡೊ ತುಕಾ ದಿಸಿನಾ ತರ್ ಭಾವಾ ತುಜ್ಯಾ ಡೊಳ್ಯಾತ್ಲೊ ಕಚ್ರೊ ಕಾಡುಂವಾ ಯೆ ಮನುನ್ ತಿಯಾ ಕಶೆ ಮನುಕ್ ಹೊತಾ? ಕುಸ್ಡ್ಯಾ! ಅದ್ದಿ ತುಜ್ಯಾ ಡೊಳ್ಯಾತ್ ಹೊತ್ತೊ ಮೊಟೊ ತುಕ್ಡೊ ಕಾಡುನ್ ಘೆ, ಮಾನಾ ತುಜ್ಯಾ ಭಾವಾಚ್ಯಾ ಡೊಳ್ಯಾತ್ಲೊ ಕಚ್ರೊ ತುಕಾ ಬರೊ ದಿಸ್ತಾ ತನ್ನಾ ತೊ ತುಕಾ ಕಾಡುಕ್ ಹೊತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:42
24 ತಿಳಿವುಗಳ ಹೋಲಿಕೆ  

ಆದರೆ ಈ ಗುಣಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಿನ ಪಾಪಗಳಿಂದ ಶುದ್ಧನಾದದ್ದನ್ನು ಮರೆತು ಬಿಟ್ಟಿದ್ದಾನೆ.


ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.


ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ:


ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.


“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?


ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.


ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ?


ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ.


“ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?


ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ?


“ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?


“ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಇಲ್ಲವೆ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು