“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”
“ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು.