Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:6 - ಕನ್ನಡ ಸಮಕಾಲಿಕ ಅನುವಾದ

6 ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮತ್ತೊಂದು ಸಬ್ಬತ್‍ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತೊಂದು ಸಬ್ಬತ್‍ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದಾಗ ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮತ್ತೊಂದು ಸಬ್ಬತ್‌ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಿಸಿದನು. ಬಲಗೈ ಬತ್ತಿಹೋಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಎಕ್ ಸಬ್ಬತಾಚ್ಯಾ ದಿಸಿ ಜೆಜು ಎಕ್ ಸಿನಾಗೊಗಾತ್ ಗೆಲೊ, ಅನಿ ಲೊಕಾಕ್ನಿ ಶಿಕ್ವುಲ್ಯಾನ್. ಥೈ ಉಜ್ವ್ಯಾ ಹಾತಿಕ್ ವಾರೆಮಾರಲ್ಲೊ ಎಕ್ ಮಾನುಸ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:6
14 ತಿಳಿವುಗಳ ಹೋಲಿಕೆ  

ಅವುಗಳಲ್ಲಿ ಅಸ್ವಸ್ಥರೂ ಕುರುಡರೂ ಕುಂಟರೂ ಪಾರ್ಶ್ವವಾಯು ಪೀಡಿತರೂ ಆಗಿದ್ದವರ ದೊಡ್ಡ ಸಮೂಹವೇ ಬಿದ್ದುಕೊಂಡು, ನೀರು ಉಕ್ಕುವುದನ್ನೇ ಕಾದು ನೋಡುತ್ತಿದ್ದರು.


ಯೇಸು ಗಲಿಲಾಯದ ಕಪೆರ್ನೌಮಿಗೆ ಬಂದು, ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದರು.


ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.


ಆಗ ಯೇಸು ನಿಯಮ ಪಂಡಿತರಿಗೂ ಫರಿಸಾಯರಿಗೂ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಮೋಶೆಯ ನಿಯಮದ ಪ್ರಕಾರವೋ?” ಎಂದು ಕೇಳಿದರು.


ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು,


ಒಂದು ಯೆಹೂದ್ಯರ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಆಗ ಅವರ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಕಿಕೊಂಡು ಅದರ ಕಾಳುಗಳನ್ನು ತಿನ್ನುತ್ತಿದ್ದರು.


ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಹೇಳಿದ ಮಾತನ್ನು ಕೇಳಿದಾಗ, ಅವನು ಪೀಠದ ಬಳಿಯಿಂದ ತನ್ನ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳೆದುಕೊಳ್ಳದ ಹಾಗೆ ಒಣಗಿ ಹೋಯಿತು.


“ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಕಷ್ಟ! ಖಡ್ಗವು ಅವನ ತೋಳಿನ ಮೇಲೆಯೂ, ಅವನ ಬಲಗಣ್ಣಿನ ಮೇಲೆಯೂ ಇರುವುದು. ಅವನ ತೋಳು ಪೂರ್ತಿಯಾಗಿ ಒಣಗುವುದು. ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವುದು.”


ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸಬ್ಬತ್ತಿಗೂ ಕರ್ತ ದೇವರಾಗಿದ್ದೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು